AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶತಕ ವಂಚಿತ ಗಿಲ್, ಕೊಹ್ಲಿ, ಶ್ರೇಯಸ್; ಲಂಕಾಗೆ 358 ರನ್ ಟಾರ್ಗೆಟ್

IND vs SL, ICC World Cup 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿದೆ.

ಪೃಥ್ವಿಶಂಕರ
|

Updated on:Nov 02, 2023 | 6:16 PM

Share
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿದೆ.

1 / 8
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ ಕೇವಲ 4 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

2 / 8
ಆ ಬಳಿಕ ಒಂದಾದ ಶುಭ್​ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಶತಕದ ಜೊತೆಯಾಟವನ್ನಾಡಿ ತಂಡವನ್ನು ಆರಂಭಿಕ ಆಘಾತದಿಂದ ಹೊರತಂದರು.

3 / 8
ಈ ವೇಳೆ ಆರಂಭಿಕ ಶುಭ್​ಮನ್ ಗಿಲ್ 92 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 92 ರನ್​ಗಳಿಸಿ ಕೇವಲ 8 ರನ್​ಗಳಿಂದ ಶತಕ ವಂಚಿತರಾದರು.

4 / 8
ಗಿಲ್ ಅವರೊಂದಿಗೆ ಉತ್ತಮ ಜೊತೆಯಾಟ ಕಟ್ಟಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಶತಕದಂಚಿನಲ್ಲಿ ಎಡವಿದರು. ಕೊಹ್ಲಿ ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿ 11 ಬೌಂಡರಿ ಸಹಿತ 88 ರನ್​ಗಳಿಸಿ ಔಟಾದರು.

5 / 8
ಈ ಇಬ್ಬರ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ ಶ್ರೇಯಸ್ ಅಯ್ಯರ್ 56 ಎಸೆತಗಳಲ್ಲಿ 3 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಸಹಿತ 82 ರನ್ ಸಿಡಿಸಿ ಔಟಾದರು.

6 / 8
ಉಳಿದಂತೆ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 21 ರನ್​ಗಳ ಇನ್ನಿಂಗ್ಸ್ ಆಡಿದರೆ, ತವರಿನಲ್ಲಿ ನಿರಾಸೆ ಅನುಭವಿಸಿದ ಸೂರ್ಯಕುಮಾರ್ ಯಾದವ್ 12 ರನ್ ಸಿಡಿಸಿದರು. ಆದರೆ ಕೊನೆಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ರವೀಂದ್ರ ಜಡೇಜಾ 35 ರನ್​ಗಳ ಕಾಣಿಕೆ ನೀಡಿದರು.

7 / 8
ಶ್ರೀಲಂಕಾ ಪರ ಮಾರಕ ದಾಳಿ ನಡೆಸಿದ ದಿಲ್ಶನ್ ಮಧುಶಂಕ ಟೀಂ ಇಂಡಿಯಾದ 6 ಟಾಪ್ ಆರ್ಡರ್ ಬ್ಯಾಟರ್​ಗಳಾದ ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ವಿಕೆಟ್ ಉರುಳಿಸಿದರು.

8 / 8

Published On - 6:06 pm, Thu, 2 November 23

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ

'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?

ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!

ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ

ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!

ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?