Kannada News Photo gallery Cricket photos IND vs SL, ICC World Cup 2023 shubman gill, virat kohli, shreyas iyer smashes fifties help India register 357 runs at Wankhede Stadium
IND vs SL: ಶತಕ ವಂಚಿತ ಗಿಲ್, ಕೊಹ್ಲಿ, ಶ್ರೇಯಸ್; ಲಂಕಾಗೆ 358 ರನ್ ಟಾರ್ಗೆಟ್
IND vs SL, ICC World Cup 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿದೆ.
1 / 8
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ ಕೇವಲ 4 ರನ್ಗಳಿಗೆ ವಿಕೆಟ್ ಒಪ್ಪಿಸಿದರು.
2 / 8
ಆ ಬಳಿಕ ಒಂದಾದ ಶುಭ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಶತಕದ ಜೊತೆಯಾಟವನ್ನಾಡಿ ತಂಡವನ್ನು ಆರಂಭಿಕ ಆಘಾತದಿಂದ ಹೊರತಂದರು.
3 / 8
ಈ ವೇಳೆ ಆರಂಭಿಕ ಶುಭ್ಮನ್ ಗಿಲ್ 92 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 92 ರನ್ಗಳಿಸಿ ಕೇವಲ 8 ರನ್ಗಳಿಂದ ಶತಕ ವಂಚಿತರಾದರು.
4 / 8
ಗಿಲ್ ಅವರೊಂದಿಗೆ ಉತ್ತಮ ಜೊತೆಯಾಟ ಕಟ್ಟಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಶತಕದಂಚಿನಲ್ಲಿ ಎಡವಿದರು. ಕೊಹ್ಲಿ ತಮ್ಮ ಇನ್ನಿಂಗ್ಸ್ನಲ್ಲಿ 94 ಎಸೆತಗಳನ್ನು ಎದುರಿಸಿ 11 ಬೌಂಡರಿ ಸಹಿತ 88 ರನ್ಗಳಿಸಿ ಔಟಾದರು.
5 / 8
ಈ ಇಬ್ಬರ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ ಶ್ರೇಯಸ್ ಅಯ್ಯರ್ 56 ಎಸೆತಗಳಲ್ಲಿ 3 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಸಹಿತ 82 ರನ್ ಸಿಡಿಸಿ ಔಟಾದರು.
6 / 8
ಉಳಿದಂತೆ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 21 ರನ್ಗಳ ಇನ್ನಿಂಗ್ಸ್ ಆಡಿದರೆ, ತವರಿನಲ್ಲಿ ನಿರಾಸೆ ಅನುಭವಿಸಿದ ಸೂರ್ಯಕುಮಾರ್ ಯಾದವ್ 12 ರನ್ ಸಿಡಿಸಿದರು. ಆದರೆ ಕೊನೆಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ರವೀಂದ್ರ ಜಡೇಜಾ 35 ರನ್ಗಳ ಕಾಣಿಕೆ ನೀಡಿದರು.
7 / 8
ಶ್ರೀಲಂಕಾ ಪರ ಮಾರಕ ದಾಳಿ ನಡೆಸಿದ ದಿಲ್ಶನ್ ಮಧುಶಂಕ ಟೀಂ ಇಂಡಿಯಾದ 6 ಟಾಪ್ ಆರ್ಡರ್ ಬ್ಯಾಟರ್ಗಳಾದ ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ವಿಕೆಟ್ ಉರುಳಿಸಿದರು.