Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕ್ರಿಕೆಟ್ ದೇವರ ಸಾರ್ವಕಾಲಿಕ ದಾಖಲೆ ಮುರಿದ ವಿರಾಟ್ ಕೊಹ್ಲಿ..!

Virat Kohli, ICC World Cup 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ಪೃಥ್ವಿಶಂಕರ
|

Updated on:Nov 02, 2023 | 4:17 PM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ.

1 / 8
ಕೊಹ್ಲಿ ಕೇವಲ 50 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇಯ 50 ರನ್ ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಲಿದ್ದಾರೆ.

2 / 8
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಕ್ಯಾಲೆಂಡರ್ ವರ್ಷದಲ್ಲಿ 1000 ಕ್ಕೂ ಹೆಚ್ಚು ಏಕದಿನ ರನ್ ಪೂರೈಸಿದ್ದಾರೆ. ವಿರಾಟ್ ತಮ್ಮ ವೃತ್ತಿ ಜೀವನದಲ್ಲಿ ಎಂಟನೇ ಬಾರಿ ಈ ಸಾಧನೆ ಮಾಡಿದ್ದಾರೆ.

3 / 8
ಈ ಹಿಂದೆ, ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ಕ್ಯಾಲೆಂಡರ್ ವರ್ಷದಲ್ಲಿ 1000 ಕ್ಕೂ ಹೆಚ್ಚು ಏಕದಿನ ರನ್ ದಾಖಲಿಸಿದ ಸಾಧನೆಯನ್ನು 7 ಬಾರಿ ಮಾಡಿದ್ದರು. ಇದೀಗ ಆ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ.

4 / 8
ಈ ಹಿಂದೆ ಕೊಹ್ಲಿ, 2011 ಮತ್ತು 2014ರ ನಡುವೆ ಪ್ರತಿ ವರ್ಷವೂ ಈ ಸಾಧನೆ ಮಾಡಿದ್ದಾರೆ. ಆ ಬಳಿಕ 2017, 2019 ಮತ್ತು 2023 ರಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 1000 ಏಕದಿನ ರನ್‌ ಸಿಡಿಸಿದ್ದರು.

5 / 8
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಕ್ರಮವಾಗಿ 1994, 1996, 1997, 1998, 2000, 2003 ಮತ್ತು 2007 ರಲ್ಲಿ ಏಕದಿನ ಮಾದರಿಯಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 1000 ರನ್‌ ಸಿಡಿಸಿ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು.

6 / 8
ಇನ್ನು ಒಂದು ಕ್ಯಾಲೆಂಡರ್ ವರ್ಷದಲ್ಲಿ ಒಂದು ಸಾವಿರ ರನ್​ಗಳ ಅಧಿಕ ಬಾರಿ ಸಿಡಿಸಿದ ಆಟಗಾರರ ಪೈಕಿ ಪ್ರಸ್ತುತ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಸಚಿನ್ ತೆಂಡೂಲ್ಕರ್ ಎರಡನೇ ಸ್ಥಾನದಲ್ಲಿದ್ದಾರೆ. ಈ ಇಬ್ಬರನ್ನು ಹೊರತುಪಡಿಸಿ ಈ ಪಟ್ಟಿಯಲ್ಲಿ ಮೂರು ಆಟಗಾರರು ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದಾರೆ.

7 / 8
ಅವರುಗಳ ಪೈಕಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ, ಶ್ರೀಲಂಕಾದ ಕುಮಾರ ಸಂಗಕ್ಕಾರ ಮತ್ತು ಆಸ್ಟ್ರೇಲಿಯಾದ ದಿಗ್ಗಜ ನಾಯಕ ರಿಕಿ ಪಾಂಟಿಂಗ್ ತಮ್ಮ ವೃತ್ತಿಜೀವನದಲ್ಲಿ ತಲಾ 6 ಬಾರಿ ಈ ಸಾಧನೆ ಮಾಡಿದ್ದಾರೆ.

8 / 8

Published On - 4:15 pm, Thu, 2 November 23

Follow us