Updated on: Mar 02, 2022 | 9:13 PM
ಟಿ20 ಸರಣಿಯಲ್ಲಿ ಶ್ರೀಲಂಕಾವನ್ನು ಸೋಲಿಸಿದ ಭಾರತ ತಂಡ ಇದೀಗ ಶುಕ್ರವಾರದಿಂದ ಅವರ ವಿರುದ್ಧ ಟೆಸ್ಟ್ ಸರಣಿಯನ್ನು ಪ್ರಾರಂಭಿಸಲಿದೆ. ಈ ಸರಣಿಯ ಮೊದಲ ಪಂದ್ಯ ಮೊಹಾಲಿಯ ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಬೆಂಗಳೂರಿನಲ್ಲಿ ಡೇ ನೈಟ್ ಟೆಸ್ಟ್ ಪಂದ್ಯವಾಗಲಿದೆ. ಈ ಸರಣಿಯಲ್ಲಿ ಭಾರತ ತಂಡದ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರ ಹೆಸರಿನಲ್ಲಿ ದೊಡ್ಡ ದಾಖಲೆ ಮಾಡುವ ಅವಕಾಶವಿದೆ.
ಆರ್ ಅಶ್ವಿನ್
ಈ ಪಂದ್ಯದಲ್ಲಿ ಅಶ್ವಿನ್ ಐದು ವಿಕೆಟ್ ಪಡೆದರೆ ಕಪಿಲ್ ದೇವ್ ಅವರನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ. ಕಪಿಲ್ ದೇವ್ ಅವರ ಖಾತೆಯಲ್ಲಿ 434 ಟೆಸ್ಟ್ ವಿಕೆಟ್‌ಗಳಿವೆ. ಅಶ್ವಿನ್ ಅವರನ್ನು ಹಿಂದಿಕ್ಕಲು ಐದು ವಿಕೆಟ್‌ಗಳ ಅಗತ್ಯವಿದೆ.
ಅಶ್ವಿನ್ ಅವರು ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿರುವುದರಿಂದ ಅವರು ಮೊಹಾಲಿ ಟೆಸ್ಟ್‌ನಲ್ಲಿ ಆಡುವ XI ನ ಭಾಗವಾಗುತ್ತಾರೆ ಎಂದು ನಿರೀಕ್ಷಿಸಲಾಗಿದೆ. ತಂಡದ ಉಪನಾಯಕ ಜಸ್ಪ್ರೀತ್ ಬುಮ್ರಾ ಅವರು ಬೌಲಿಂಗ್, ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮೂರನ್ನೂ ನೆಟ್ಸ್‌ನಲ್ಲಿ ಮಾಡಿದ್ದಾರೆ ಮತ್ತು ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಹೇಳಿದ್ದಾರೆ. ಅಶ್ವಿನ್ ಮೊಹಾಲಿ ಟೆಸ್ಟ್ ಆಡಲಿದ್ದು ಕಪಿಲ್ ಅವರ ದಾಖಲೆ ಮುರಿಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
132 ರನ್ ಪಂದ್ಯಗಳಲ್ಲಿ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದವರ ವಿಷಯದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಸದ್ಯ ಕಪಿಲ್ ದೇವ್ ಎರಡನೇ ಸ್ಥಾನದಲ್ಲಿದ್ದರೆ, ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ. ಸ್ಪಿನ್ ಬೌಲರ್ ಹರ್ಭಜನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.