Asia Cup 2023: ಏಷ್ಯಾಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ರವೀಂದ್ರ ಜಡೇಜಾ..!

Ravindra Jadeja: ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್‌ನಲ್ಲಿ ಭಾರತದ ಪ್ರಮುಖ ವಿಕೆಟ್ ಟೇಕರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಜಡೇಜಾ, ಮಾಜಿ ವೇಗಿ ಇರ್ಫಾನ್ ಪಠಾಣ್ ಅವರನ್ನು ಈ ವಿಚಾರದಲ್ಲಿ ಹಿಂದಿಕ್ಕಿದ್ದಾರೆ. ಶ್ರೀಲಂಕಾ ನಾಯಕ ಶನಕ ಅವರ ವಿಕೆಟ್ ಪಡೆದ ಕೂಡಲೇ ಜಡೇಜಾ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಉರುಳಿಸಿದ ಭಾರತೀಯ ಬೌಲರ್‌ಗಳ ಪೈಕಿ ಅಗ್ರಸ್ಥಾನಕ್ಕೆ ಏರಿದ್ದಾರೆ.

ಪೃಥ್ವಿಶಂಕರ
|

Updated on: Sep 13, 2023 | 6:40 AM

2023ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಸತತ ಎರಡು ದಿನಗಳಲ್ಲಿ ಪಾಕಿಸ್ತಾನ ಮತ್ತು ನಂತರ ಶ್ರೀಲಂಕಾವನ್ನು ಸೋಲಿಸುವ ಮೂಲಕ ಸೆಪ್ಟೆಂಬರ್ 17 ರಂದು ನಡೆಯಲಿರುವ ಪ್ರಶಸ್ತಿ ಪಂದ್ಯದ ಟಿಕೆಟ್ ಅನ್ನು ಗೆದ್ದುಕೊಂಡಿತು.

1 / 7
ಕೊಲಂಬೊದಲ್ಲಿ ನಡೆದ ಸೂಪರ್-4 ರ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು 41 ರನ್‌ಗಳಿಂದ ಸೋಲಿಸಿತು. ಇನ್ನು ಈ ಪಂದ್ಯದಲ್ಲಿ ಉಭಯ ತಂಡಗಳ ಸ್ಪಿನ್ನರ್​ಗಳು ಪ್ರಾಬಲ್ಯ ಮೆರೆದರು. ಟೀಂ ಇಂಡಿಯಾದಿಂದ ಕುಲ್ದೀಪ್ 4 ಹಾಗೂ ಜಡೇಜಾ 2 ವಿಕೆಟ್ ಪಡೆದು ಮಿಂಚಿದರು.

2 / 7
ಇದರೊಂದಿಗೆ ಇತಿಹಾಸ ಬರೆದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್‌ನಲ್ಲಿ ಭಾರತದ ಪ್ರಮುಖ ವಿಕೆಟ್ ಟೇಕರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಜಡೇಜಾ, ಮಾಜಿ ವೇಗಿ ಇರ್ಫಾನ್ ಪಠಾಣ್ ಅವರನ್ನು ಈ ವಿಚಾರದಲ್ಲಿ ಹಿಂದಿಕ್ಕಿದ್ದಾರೆ.

3 / 7
ಶ್ರೀಲಂಕಾ ನಾಯಕ ಶನಕ ಅವರ ವಿಕೆಟ್ ಪಡೆದ ಕೂಡಲೇ ಜಡೇಜಾ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಉರುಳಿಸಿದ ಭಾರತೀಯ ಬೌಲರ್‌ಗಳ ಪೈಕಿ ಅಗ್ರಸ್ಥಾನಕ್ಕೆ ಏರಿದ್ದಾರೆ.

4 / 7
ಇದುವರೆಗೆ ಜಡೇಜಾ ಏಷ್ಯಾಕಪ್‌ನಲ್ಲಿ 18 ಪಂದ್ಯಗಳನ್ನಾಡಿದ್ದು, ಇದರಲ್ಲಿ 25.56 ಸರಾಸರಿಯಲ್ಲಿ 23 ವಿಕೆಟ್‌ಗಳನ್ನು ಪಡೆದಿದ್ದಾರೆ. 29 ರನ್​ಗಳಿಗೆ 4 ವಿಕೆಟ್​ ಉರುಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

5 / 7
ಇದೀಗ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿರುವ ಪಠಾಣ್ ತಮ್ಮ ವೃತ್ತಿಜೀವನದಲ್ಲಿ ಏಷ್ಯಾಕಪ್‌ನಲ್ಲಿ ಕೇವಲ 12 ಪಂದ್ಯಗಳಲ್ಲಿ 22 ವಿಕೆಟ್‌ಗಳನ್ನು ಪಡೆದಿದ್ದರು.

6 / 7
ಇನ್ನು ಈ ಪಂದ್ಯದಲ್ಲಿ ಪ್ರಮುಖ 4 ವಿಕೆಟ್ ಉರುಳಿಸಿದ ಎಡಗೈ ಸ್ಪಿನ್ನರ್ ಕುಲ್ದೀಪ್ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ 5 ವಿಕೆಟ್ ಪಡೆದಿದ್ದ ಕುಲ್ದೀಪ್, ಇದುವರೆಗೆ ಪಂದ್ಯಾವಳಿಯಲ್ಲಿ ಕೇವಲ ಹತ್ತು ಪಂದ್ಯಗಳಲ್ಲಿ 17 ವಿಕೆಟ್‌ಗಳನ್ನು ಪಡೆದಿದ್ದಾರೆ.

7 / 7
Follow us