ಲಂಕಾ ಪ್ರವಾಸಕ್ಕೂ ಮುನ್ನ ತಂಡಕ್ಕೆ ಬೌಲಿಂಗ್ ಕೋಚ್, ಬ್ಯಾಟಿಂಗ್ ಕೋಚ್ ಹಾಗೂ ಫಿಲ್ಡಿಂಗ್ ಕೋಚ್ ಆಯ್ಕೆ ಮಾಡಬೇಕಾಗಿದೆ. ಈಗಾಗಲೇ ಈ ಹುದ್ದೆಗಳಿಗೆ ಹಲವರ ಹೆಸರುಗಳು ಕೇಳಿ ಬರುತ್ತಿವೆಯಾದರೂ, ಯಾರ ಹೆಸರೂ ಇನ್ನು ಅಂತಿಮವಾಗಿಲ್ಲ. ಇದರೊಳಗೆ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಮೋರ್ನೆ ಮೊರ್ಕೆಲ್ ಹೆಸರು ಮುಂಚೂಣಿಯಲ್ಲಿದೆ. ಆದರೆ ಶ್ರೀಲಂಕಾ ಪ್ರವಾಸದಲ್ಲಿ ಅವರು ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ತೀರ ಕಡಿಮೆ.