AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಇಬ್ಬರು ಸ್ಟಾರ್ ಆಟಗಾರರಿಗೆ ಗಾಯ; ಮೊದಲ ಟೆಸ್ಟ್​ಗೆ ಅಲಭ್ಯ

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆಗಸ್ಟ್ 15 ರಂದು ಆರಂಭವಾಗಲಿದೆ. ಈ ಸರಣಿಗೂ ಮುನ್ನ ಶ್ರೀಲಂಕಾ ತಂಡಕ್ಕೆ ಹಿನ್ನಡೆಯಾಗಿದ್ದು, ಇಬ್ಬರು ಅನುಭವಿ ಬ್ಯಾಟ್ಸ್‌ಮನ್‌ಗಳಾದ ಕುಸಲ್ ಮೆಂಡಿಸ್ (ಮಂಡಿರಜ್ಜು) ಮತ್ತು ಪಾಥಮ್ ನಿಸ್ಸಂಕಾ (ಮಣಿಕಟ್ಟು) ಗಾಯದಿಂದ ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

ಪೃಥ್ವಿಶಂಕರ
|

Updated on: Aug 07, 2026 | 8:57 PM

Share
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 15 ರಂದು ಆರಂಭವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ಆತಿಥೇಯ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಇಬ್ಬರು ಅನುಭವಿ ಬ್ಯಾಟ್ಸ್‌ಮನ್​ಗಳು ಗಾಯದಿಂದ ಬಳಲುತ್ತಿದ್ದು, ಇವರಿಬ್ಬರು ಮೊದಲ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ.

1 / 5
 ಶ್ರೀಲಂಕಾದ ಇಬ್ಬರು ಅನುಭವಿ ಬ್ಯಾಟ್ಸ್‌ಮನ್​ಗಳಾದ ಕುಸಲ್ ಮೆಂಡಿಸ್ ಹಾಗೂ ಪಾತುಮ್ ನಿಸ್ಸಂಕಾ ಗಾಲೆ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ. ಗಾಯದಿಂದಾಗಿ ಕುಸಲ್ ಮೆಂಡಿಸ್ ಮೊದಲ ಟೆಸ್ಟ್ ಆಡುವುದಿಲ್ಲ ಎಂಬ ಸುದ್ದಿ ಗುರುವಾರವೇ ಹೊರಬಿದ್ದಿತ್ತು. ಇದೀಗ ಪಾತುಮ್ ನಿಸ್ಸಂಕಾ ಕೂಡ ಮೊದಲ ಟೆಸ್ಟ್ ಆಡುತ್ತಿಲ್ಲ ಎನ್ನಲಾಗಿದೆ.

2 / 5
ಲಂಕಾ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಕುಸಲ್ ಮೆಂಡಿಸ್ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ರನ್ ಗಳಿಸುವ ಪ್ರಯತ್ನದಲ್ಲಿ ಗಾಯಕ್ಕೆ ತುತ್ತಾಗಿದ್ದ ಕುಸಲ್ ಮೆಂಡಿಸ್ ಪ್ರಸ್ತುತ ಚೇತರಿಕೆಯ ಹಾದಿಯಲ್ಲಿದ್ದಾರೆ. ಮೊದಲ ಟೆಸ್ಟ್​ಗೆ ಇನ್ನು ವಾರಕ್ಕೂ ಹೆಚ್ಚು ಸಮಯವಿದೆಯಾದರೂ, ಅಷ್ಟೊರಳಗೆ ಕುಸಲ್ ಮೆಂಡಿಸ್ ಚೇತರಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.

3 / 5
ಇತ್ತ ಶ್ರೀಲಂಕಾ ತಂಡದ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಪಾಥಮ್ ನಿಸ್ಸಾಂಕಾ ಮಣಿಕಟ್ಟಿನ ಗಾಯದಿಂದ ಬಳಲುತ್ತಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಈ ಗಾಯಕ್ಕೆ ತುತ್ತಾಗಿದ್ದ ಪಾಥಮ್, ಜುಲೈ 2026 ರ ಆರಂಭದಲ್ಲಿ ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಈ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ನಿಸ್ಸಾಂಕಾ  ಕೂಡ ಮೊದಲ ಟೆಸ್ಟ್ ಆಡುತ್ತಿಲ್ಲ.

4 / 5
ಇಬ್ಬರು ಪ್ರಮುಖ ಬ್ಯಾಟ್ಸ್‌ಮನ್‌ಗಳ ಅನುಪಸ್ಥಿತಿಯು ಶ್ರೀಲಂಕಾ ತಂಡಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. ಮತ್ತೊಂದೆಡೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪೈಪೋಟಿಯಲ್ಲಿ ಉಳಿಯಲು ಭಾರತ ಈ ಸರಣಿಯನ್ನು 2-0 ಅಂತರದಿಂದ ಗೆಲ್ಲಲೇಬೇಕಾಗಿದೆ. ಹೀಗಿರುವಾಗ ಇವರಿಬ್ಬರ ಅಲಭ್ಯತೆ ಒಂದರ್ಥದಲ್ಲಿ ಭಾರತ ತಂಡಕ್ಕೆ ಮೊದಲ ಟೆಸ್ಟ್ ಗೆಲುವಿಗೆ ಉತ್ತಮ ಅವಕಾಶವನ್ನು ಒದಗಿಸಿಕೊಟ್ಟಿದೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು

ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ

‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು

ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ

ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ

ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ

ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್