- Kannada News Photo gallery Cricket photos IND vs WI 1st ODI Here is the photos of India vs west indies 1st ODI match
IND vs WI 1st ODI: ಭಾರತದ ಸ್ಪಿನ್ ಬಿರುಗಾಳಿಗೆ ವೆಸ್ಟ್ ಇಂಡೀಸ್ ತತ್ತರ: ಇಂಡೋ-ವಿಂಡೀಸ್ ಮೊದಲ ಏಕದಿನದ ರೋಚಕ ಫೋಟೋ ನೋಡಿ
Kuldeep Yadav: ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
Updated on: Jul 28, 2023 | 7:34 AM

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್ಗಳ ಜಯ ಸಾಧಿಸಿತು.

ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್ಗಳಲ್ಲಿ ಕೇವಲ 114 ರನ್ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿದರು.

ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್ಗೆ ಬಲಿಯಾದರು.

ಶಾರ್ದೂಲ್ ಥಾಕೂರ್ 1 ರನ್ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.



















