- Kannada News Photo gallery Cricket photos IND vs WI 2nd Test India Cricket Team will have their first practice session at Queen’s Park Oval on Tuesday
IND vs WI 2nd Test: ಟ್ರಿನಿಡಾಡ್ಗೆ ತಲುಪಿದ ಟೀಮ್ ಇಂಡಿಯಾ: ದ್ವಿತೀಯ ಟೆಸ್ಟ್ಗೆ ಇಂದಿನಿಂದ ಅಭ್ಯಾಸ
India vs West Indies Test: ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ಅಭ್ಯಾಸ ಶುರು ಮಾಡಲಿದೆ.
Updated on: Jul 18, 2023 | 7:34 AM

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್ನ ಪೋರ್ಟ್ ಆಫ್ ಸ್ಪೇನ್ಗೆ ತಲುಪಿದ್ದಾರೆ.

ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ಅಭ್ಯಾಸ ಶುರು ಮಾಡಲಿದೆ.

ಮೊದಲ ಟೆಸ್ಟ್ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ಇನ್ನು ಕ್ವೀನ್ಸ್ ಪಾರ್ಕ್ ಓವಲ್ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.
