IND vs WI: ವಿಂಡೀಸ್ ವಿರುದ್ಧ 85 ರನ್ ಸಿಡಿಸಿ ಪಾಕ್ ಆಟಗಾರನ ದಾಖಲೆ ಮುರಿದ ಶುಭ್​ಮನ್ ಗಿಲ್..!

Shubman Gill: ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅವರೊಂದಿಗೆ 142 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡ ಗಿಲ್, 92 ಎಸೆತಗಳಲ್ಲಿ 85 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಪೃಥ್ವಿಶಂಕರ
|

Updated on: Aug 02, 2023 | 7:33 AM

ಐಪಿಎಲ್ ಬಳಿಕ ಕಳಪೆ ಫಾರ್ಮ್​ನಿಂದಾಗಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್, ಅಂತಿಮವಾಗಿ ವೆಸ್ಟ್ ಇಂಡೀಸ್ ಪ್ರವಾಸದ ಕೊನೆಯ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸುವುದರೊಂದಿಗೆ ತಮ್ಮ ಹಳೆಯ ಲಯವನ್ನು ಕಂಡುಕೊಂಡಿದ್ದಾರೆ.

1 / 11
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೆಸ್ಟ್ ಸರಣಿ ಸೇರಿದಂತೆ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದ ಗಿಲ್, ಏಕದಿನ ವಿಶ್ವಕಪ್​ಗೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಹೊಸ್ತಿಲಿನಲ್ಲಿದ್ದರು. ಆದರೆ ಅಂತಿಮ ಏಕದಿನ ಪಂದ್ಯದಲ್ಲಿ 85 ರನ್​ಗಳ ಇನ್ನಿಂಗ್ಸ್ ಆಡಿದ ಗಿಲ್, ವಿಶ್ವಕಪ್​ಗೂ ಮುನ್ನ ಆಯ್ಕೆ ಮಂಡಳಿ ನಿಟ್ಟುಸಿರು ಬಿಡುವಂತೆ ಮಾಡಿದರು.

2 / 11
ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅವರೊಂದಿಗೆ 142 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡ ಗಿಲ್, 92 ಎಸೆತಗಳಲ್ಲಿ 85 ರನ್ ಬಾರಿಸಿ ವಿಕೆಟ್ ಒಪ್ಪಿಸುವುದರೊಂದಿಗೆ, ತಮ್ಮ ಐದನೇ ಏಕದಿನ ಶತಕದಿಂದ ವಂಚಿತರಾದರು. ಆದರೆ ಈ ಅಧರ್ಶತಕದ ಇನ್ನಿಂಗ್ಸ್​ನಿಂದ ಗಿಲ್ ಹಲವು ದಾಖಲೆಗಳನ್ನು ಬರೆದರು.

3 / 11
ಒಂದು ವೇಳೆ ಗಿಲ್ ಈ ಪಂದ್ಯದಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದ್ದರೆ, ವೇಗವಾಗಿ ಐದು ಏಕದಿನ ಶತಕಗಳನ್ನು ಬಾರಿಸಿದ ಮತ್ತೊಬ್ಬ ಭಾರತೀಯ ಶಿಖರ್ ಧವನ್ ಅವರ ದಾಖಲೆಯನ್ನು ಮುರಿಯುತ್ತಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಧವನ್ 28 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆಯನ್ನು ಪೂರ್ಣಗೊಳಿಸಿದ್ದರು.

4 / 11
ಆದರೆ ವಿಶ್ವ ಕ್ರಿಕೆಟ್​ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಗಿಲ್, 27 ಏಕದಿನ ಇನ್ನಿಂಗ್ಸ್‌ಗಳ ನಂತರ ಅತಿ ಹೆಚ್ಚು ಏಕದಿನ ರನ್ ದಾಖಲಿಸಿದ ಆಟಗಾರನೆಂಬ ದಾಖಲೆಯನ್ನು ಗಿಲ್ ಮುರಿದಿದ್ದಾರೆ.

5 / 11
ಇದುವರೆಗೆ ಟೀಂ ಇಂಡಿಯಾ ಪರ 27 ಏಕದಿನ ಪಂದ್ಯಗಳನ್ನಾಡಿರುವ ಗಿಲ್, ಈ ಮಾದರಿಯಲ್ಲಿ 62.48 ಸರಾಸರಿಯಲ್ಲಿ ಒಟ್ಟು 1437 ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಪಾಕಿಸ್ತಾನದ ಬ್ಯಾಟರ್ ಇಮಾನ್-ಉಲ್-ಹಕ್ ಅವರ ನಾಲ್ಕು ವರ್ಷಗಳ ಸಾಧನೆಯನ್ನು ಗಿಲ್ ಮುರಿದಿದ್ದಾರೆ.

6 / 11
ವಾಸ್ತವವಾಗಿ ಪಾಕಿಸ್ತಾನದ ಬ್ಯಾಟರ್ ಇಮಾನ್-ಉಲ್-ಹಕ್ 27 ಏಕದಿನ ಪಂದ್ಯಗಳಲ್ಲಿ 1381 ರನ್ ಕಲೆಹಾಕಿ, ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದರು. ಇದೀಗ ಗಿಲ್ ಈ ದಾಖಲೆಯನ್ನು ಮುರಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಈ ಇಬ್ಬರನ್ನು ಹೊರತುಪಡಿಸಿ ಇನ್ನ್ಯಾರು ಸ್ಥಾನ ಪಡೆದಿದ್ದಾರೆ ಎಂಬುದನ್ನು ನೋಡುವುದಾದರೆ..

7 / 11
1353 ರನ್ ಕಲೆಹಾಕಿರುವ ದಕ್ಷಿಣ ಆಫ್ರಿಕಾದ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ದುಸ್ಸೆನ್ 3ನೇ ಸ್ಥಾನದಲ್ಲಿದ್ದಾರೆ.

8 / 11
27 ಏಕದಿನ ಇನ್ನಿಂಗ್ಸ್​ಗಳಲ್ಲಿ 1353 ರನ್ ಬಾರಿಸಿರುವ ನೆದರ್ಲೆಂಡ್ಸ್​ನ ರಿಯಾನ್ ಟೆನ್ ಡೋಸ್ಚೇಟ್ 4ನೇ ಸ್ಥಾನದಲ್ಲಿದ್ದಾರೆ

9 / 11
1342 ರನ್​ಗಳೊಂದಿಗೆ ಇಂಗ್ಲೆಂಡ್​ನ ಜೊನಾಥನ್ ಟ್ರಾಟ್ ಐದನೇ ಸ್ಥಾನದಲ್ಲಿದ್ದಾರೆ.

10 / 11
1330 ರನ್​ಗಳೊಂದಿಗೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಮ್ ಆರನೇ ಸ್ಥಾನದಲ್ಲಿದ್ದಾರೆ.

11 / 11
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ