IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!

India vs West Indies Odi Squad: ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್

Jan 27, 2022 | 3:05 PM
TV9kannada Web Team

| Edited By: Zahir PY

Jan 27, 2022 | 3:05 PM

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ  ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಇದೇ ಮೊದಲ ಬಾರಿಗೆ ಸ್ಪಿನ್ನರ್ ರವಿ ಬಿಷ್ಣೋಯ್ ಹಾಗೂ ದೀಪಕ್ ಹೂಡಾ ಸ್ಥಾನ ಪಡೆದಿದ್ದಾರೆ. ಹಾಗೆಯೇ ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ತಂಡಕ್ಕೆ ಮರಳಿದ್ದಾರೆ.

1 / 9
ಇನ್ನೊಂದೆಡೆ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ವೇಳೆ ಟೀಮ್ ಇಂಡಿಯಾದಲ್ಲಿದ್ದ ಐದು ಆಟಗಾರರು ತಂಡದಿಂದ ಹೊರಗುಳಿದಿದ್ದಾರೆ. ಅದರಲ್ಲೂ ಇಬ್ಬರು ಆಟಗಾರರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಿಲ್ಲ. ಹಾಗಿದ್ರೆ ಸೌತ್ ಆಫ್ರಿಕಾ ವಿರುದ್ದದ ಸರಣಿಗೆ ಆಯ್ಕೆಯಾಗಿ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಆಟಗಾರರು ಯಾರೆಲ್ಲಾ ನೋಡೋಣ...

2 / 9
ಮೊಹಮ್ಮದ್ ಶಮಿ: ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ, ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವಿಶ್ರಾಂತಿ ಕಾರಣ  ವೆಸ್ಟ್ ಇಂಡೀಸ್ ವಿರುದ್ದದ ಸರಣಿಗೂ ಶಮಿ ಅಲಭ್ಯರಾಗಿದ್ದಾರೆ.

3 / 9
ಜಸ್​ಪ್ರೀತ್ ಬುಮ್ರಾ: ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅತೀ ಹೆಚ್ಚು ಓವರ್ ಬೌಲಿಂಗ್ ಮಾಡಿದ್ದ ಜಸ್​ಪ್ರೀತ್ ಬುಮ್ರಾ ಕೂಡ ವೆಸ್ಟ್ ಇಂಡೀಸ್ ಸರಣಿಯಿಂದ ಹೊರಗುಳಿದು ವಿಶ್ರಾಂತಿ ಪಡೆದಿದ್ದಾರೆ.

4 / 9
ರವಿಚಂದ್ರನ್ ಅಶ್ವಿನ್: ಸೌತ್ ಆಫ್ರಿಕಾ ಸರಣಿಯಲ್ಲಿ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ್ದ ಅಶ್ವಿನ್ ಈ ಬಾರಿ ತಂಡಕ್ಕೆ ಆಯ್ಕೆಯಾಗಿಲ್ಲ. ಅಶ್ವಿನ್ ಕಾಲಿನ ಮಣಿಕಟ್ಟಿನ ನೋವಿನಿಂದ ಬಳಲುತ್ತಿದ್ದು, ಹೀಗಾಗಿ ಅವರನ್ನು ತಂಡದ ಆಯ್ಕೆಯಲ್ಲಿ ಪರಿಗಣಿಸಿಲ್ಲ ಎಂದು ತಿಳಿದು ಬಂದಿದೆ.

5 / 9
ಜಯಂತ್ ಯಾದವ್: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ವೇಳೆ ಕೊರೋನಾ ಸೋಂಕಿಗೆ ಒಳಗಾಗಿದ್ದ ವಾಷಿಂಗ್ಟನ್ ಸುಂದರ್ ಬದಲಿಗೆ ಆಯ್ಕೆಯಾಗಿದ್ದ ಆಲ್​ರೌಂಡರ್ ಜಯಂತ್ ಯಾದವ್ ಅವರನ್ನು ಈ ಬಾರಿ ಕೈ ಬಿಡಲಾಗಿದೆ. ಸುಂದರ್ ತಂಡಕ್ಕೆ ಮರಳಿದ್ದು, ಹೀಗಾಗಿ ಜಯಂತ್ ಯಾದವ್ ಅವರ ಅವಕಾಶ ಕೈತಪ್ಪಿದೆ.

6 / 9
ನವದೀಪ್ ಸೈನಿ: ಇನ್ನು ಸೌತ್ ಆಫ್ರಿಕಾ ಸರಣಿಯಲ್ಲಿ ಗಾಯಗೊಂಡಿದ್ದ ಮೊಹಮ್ಮದ್ ಸಿರಾಜ್ ಬದಲಿಯಾಗಿ ವೇಗಿ ನವದೀಪ್ ಸೈನಿ ಆಯ್ಕೆಯಾಗಿದ್ದರು. ಆದರೆ ಇದೀಗ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಿಂದ ಸೈನಿಯನ್ನು ಕೈ ಬಿಡಲಾಗಿದೆ.

7 / 9
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ  ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

8 / 9
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

9 / 9

Follow us on

Most Read Stories

Click on your DTH Provider to Add TV9 Kannada