Updated on: Jul 26, 2023 | 12:22 PM
ಇಂಜುರಿಗೆ ತುತ್ತಾಗಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಂ ಇಂಡಿಯಾದ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಜುಲೈ 27 ರಂದು ಬಾರ್ಬಡೋಸ್‌ನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಯಿದೆ.
ತೊಡೆಸಂದು ಗಾಯಕ್ಕೆ ತುತ್ತಾಗಿದ್ದ ಶಾರ್ದೂಲ್ ಅವರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಟ್ಟಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು.
ಆದರೆ ಆ ಬಳಿಕ ಇದುವರೆಗು ಶಾರ್ದೂಲ್ ಚೇತರಿಕೆಯ ಬಗ್ಗೆ ಯಾವುದೇ ಅಪ್ಡೇಟ್ ಹೊರಬಿದ್ದಿಲ್ಲ. ಹೀಗಾಗಿ ಮೊದಲ ಏಕದಿನ ಪಂದ್ಯಕ್ಕೆ ಶಾರ್ದೂಲ್ ಠಾಕೂರ್ ಅಲಭ್ಯರಾಗುವ ಸಾಧ್ಯತೆಗಳಿವೆ.
ಒಂದು ವೇಳೆ ಶಾರ್ದೂಲ್ ಠಾಕೂರ್ ಮೊದಲ ಏಕದಿನ ಪಂದ್ಯದಿಂದ ಹೊರಬಿದ್ದರೆ, ಅವರ ಜಾಗದಲ್ಲಿ ಮತ್ತೊಬ್ಬ ಸ್ಪಿನ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆಯಬಹುದಾಗಿದೆ.
ಸದ್ಯ ಉತ್ತಮ ಫಾರ್ಮ್‌ನಲ್ಲಿರುವ ಅಕ್ಷರ್ ಪಟೇಲ್, ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಟೀಮ್ ಇಂಡಿಯಾಕ್ಕೆ ನಿರ್ಣಾಯಕ ಸಮಯದಲ್ಲಿ ನೆರವಾಗಲಿದ್ದಾರೆ.
ಏತನ್ಮಧ್ಯೆ, ಶಾರ್ದೂಲ್ ಟೆಸ್ಟ್ ಸರಣಿಯಲ್ಲಿ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. ಆಡಿದ ಏಕೈಕ ಟೆಸ್ಟ್ನಲ್ಲಿ ಕೇವಲ ಏಳು ಓವರ್‌ಗಳನ್ನು ಬೌಲ್ ಮಾಡಿದ ಠಾಕೂರ್ ಒಂದು ವಿಕೆಟ್ ಮಾತ್ರ ಪಡೆದಿದ್ದರು. ಕೊನೆಯದಾಗಿ ಮಾರ್ಚ್ 17 ರಂದು ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯವನ್ನಾಡಿದ್ದ ಶಾರ್ದೂಲ್ ಆ ಪಂದ್ಯದಲ್ಲಿ ಕೇವಲ 2 ಓವರ್ ಬೌಲ್ ಮಾಡಿದ್ದರು.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಯದೇವ್ ಉನದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.