- Kannada News Photo gallery Cricket photos IND vs WI Hardik Pandya equal Virat Kohli Record in t20i against west indies
IND vs WI: ಸಿಕ್ಸರ್ ಸಿಡಿಸಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಹಾರ್ದಿಕ್ ಪಾಂಡ್ಯ..!
Hardik Pandya: ವಾಸ್ತವವಾಗಿ ಸಿಕ್ಸರ್ ಸಿಡಿಸುವ ಮೂಲಕ ಜಯ ತಂದುಕೊಟ್ಟ ಪಾಂಡ್ಯ, ಟಿ20ಯಲ್ಲಿ ಈ ರೀತಿಯಾಗಿ ಅಂದರೆ, ಸಿಕ್ಸರ್ ಸಿಡಿಸುವ ಮೂಲಕ ತಂಡವನ್ನು 4ನೇ ಬಾರಿಗೆ ಗೆಲುವಿನ ದಡ ಮುಟ್ಟಿಸಿದರು. 18ನೇ ಓವರ್ನ ಐದನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ರೋಚಕ ಜಯ ತಂದುಕೊಟ್ಟ ಪಾಂಡ್ಯ ಈ ಗೆಲುವಿನ ಸಿಕ್ಸರ್ ಜೊತೆಗೆ ಕೊಹ್ಲಿ ದಾಖಲೆಯನ್ನು ಮುರಿದರು.
Updated on:Aug 09, 2023 | 10:42 AM

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ವಿಂಡೀಸ್ ನೀಡಿದ 159 ರನ್ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಇನ್ನು 13 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಬೌಲಿಂಗ್ನಲ್ಲಿ ಕುಲ್ದೀಪ್ ಯಾದವ್ 3 ವಿಕೆಟ್ ಪಡೆದು ಮಿಂಚಿದರೆ, ಸೂರ್ಯಕುಮಾರ್ ಯಾದವ್ 83 ರನ್ ಹಾಗೂ ತಿಲಕ್ ವರ್ಮಾ ಅಜೇಯ 49 ರನ್ಗಳ ಇನ್ನಿಂಗ್ಸ್ ಆಡಿದರು. ಇವರೊಂದಿಗೆ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಅಜೇಯ 20 ರನ್ ಬಾರಿಸಿದರು.

ಅದರಲ್ಲೂ 18ನೇ ಓವರ್ನ ಐದನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಹಾರ್ದಿಕ್ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದು ವಿಶೇಷವಾಗಿತ್ತು. ಅಲ್ಲದೆ ಈ ಗೆಲುವಿನ ಸಿಕ್ಸರ್ ಜೊತೆಗೆ ಪಾಂಡ್ಯ, ಕೊಹ್ಲಿ ದಾಖಲೆಯನ್ನು ಮುರಿದರು.

ವಾಸ್ತವವಾಗಿ ಸಿಕ್ಸರ್ ಸಿಡಿಸುವ ಮೂಲಕ ಜಯ ತಂದುಕೊಟ್ಟ ಪಾಂಡ್ಯ, ಟಿ20ಯಲ್ಲಿ ಈ ರೀತಿಯಾಗಿ ಅಂದರೆ, ಸಿಕ್ಸರ್ ಸಿಡಿಸುವ ಮೂಲಕ ತಂಡವನ್ನು 4ನೇ ಬಾರಿಗೆ ಗೆಲುವಿನ ದಡ ಮುಟ್ಟಿಸಿದರು.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಈ ಚುಟುಕು ಮಾದರಿಯಲ್ಲಿ ಸಿಕ್ಸರ್ ಸಿಡಿಸುವ ಮೂಲಕ ತಂಡಕ್ಕೆ 4 ಬಾರಿ ಗೆಲುವು ತಂದುಕೊಟ್ಟಿದ್ದಾರೆ. ಇದೀಗ ಈ ದಾಖಲೆಯನ್ನು ಪಾಂಡ್ಯ ಸರಿಗಟ್ಟಿದ್ದಾರೆ.

ಇನ್ನು ಈ ಟಿ20 ಸರಣಿ ಮೂಲಕ ಭಾರತ ಕ್ರಿಕೆಟ್ಗೆ ಪದಾರ್ಪಣೆ ಮಾಡಿರುವ ಯುವ ಬ್ಯಾಟರ್ ತಿಲಕ್ ವರ್ಮಾ ಕೂಡ ಆಡಿರುವ ಮೂರು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನಿಡಿದ್ದಾರೆ. 2ನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ತಿಲಕ್, ಈ ಪಂದ್ಯದಲ್ಲೂ ಅಜೇಯ 49 ರನ್ ಸಿಡಿಸಿದರು.

ಕೇವಲ 1 ರನ್ಗಳಿಂದ ಅರ್ಧಶತಕ ವಂಚಿತರಾದ ತಿಲಕ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ನಾಲ್ಕು ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಆಡುವಾಗ 49 ರನ್ ಗಳಿಸಿ ಅಜೇಯರಾಗಿ ಉಳಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡರು. ಇವರಿಗೂ ಮುನ್ನ 2016ರಲ್ಲಿ ಸುರೇಶ್ ರೈನಾ 49 ರನ್ ಸಿಡಿಸಿ ಅಜೇಯರಾಗಿ ಉಳಿದಿದ್ದರು.
Published On - 10:33 am, Wed, 9 August 23




