AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಇಶಾಂತ್ ಶರ್ಮಾ ಕ್ರಿಕೆಟ್ ಕೆರಿಯರ್ ಅಂತ್ಯ? ಹೊಸ ಅವತಾರದಲ್ಲಿ ವಿಂಡೀಸ್ ನಾಡಿಗೆ ಕಾಲಿಟ್ಟ ವೇಗಿ

Ishant Sharma: ವರ್ಷಗಳಿಂದ ಇಶಾಂತ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದು, ಇದೀಗ ತಮ್ಮ ವೃತ್ತಿ ಬದುಕಿಗೆ ಹೊಸ ಆಯಾಮ ನೀಡಲು ಮುಂದಾಗಿದ್ದಾರೆ.

ಪೃಥ್ವಿಶಂಕರ
|

Updated on: Jul 10, 2023 | 8:25 AM

Share
ಭಾರತ ಪರ 100ಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿರುವ ಟೀಂ ಇಂಡಿಯಾದ ವೇಗದ ಬೌಲರ್ ಇಶಾಂತ್ ಶರ್ಮಾ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದಾರೆ. ವರ್ಷಗಳಿಂದ ಇಶಾಂತ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದು, ಇದೀಗ ತಮ್ಮ ವೃತ್ತಿ ಬದುಕಿಗೆ ಹೊಸ ಆಯಾಮ ನೀಡಲು ಮುಂದಾಗಿದ್ದಾರೆ.

1 / 7
ಈ ವರ್ಷ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆಡಿದ್ದ ಇಶಾಂತ್, 2021ರಲ್ಲಿ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಸದ್ಯ ಸಿರಾಜ್, ಅರ್ಷದೀಪ್, ನವದೀಪ್, ಉಮ್ರಾನ್ ಸೇರಿದಂತೆ ಹಲವು ವೇಗದ ಬೌಲರ್‌ಗಳು ತಂಡದಲ್ಲಿ ಸ್ಥಾನ ಪಡೆಯುವ ರೇಸ್‌ನಲ್ಲಿದ್ದಾರೆ. ಹೀಗಾಗಿ ಇಶಾಂತ್ ತಂಡ ಸೇರುವ ಸಾಧ್ಯತೆ ತೀರಾ ಕಡಿಮೆ.

2 / 7
ಇವೆಲ್ಲದರ ನಡುವೆ ಇಶಾಂತ್ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಶಾಂತ್, ಟೀಂ ಇಂಡಿಯಾ ಪರ ಮೈದಾನದಲ್ಲಿ ಕಾಣಿಸದಿದ್ದರೂ ಮೈದಾನದ ಹೊರಗೆ ಕಾಮೆಂಟರಿ ಬಾಕ್ಸ್​ನಲ್ಲಿ ಕಾಮೆಂಟೆಟರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

3 / 7
ಜುಲೈ 12 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಟೆಸ್ಟ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಇಶಾಂತ್ ಕಾಮೆಂಟರಿ ಮಾಡುವುದನ್ನು ಕಾಣಬಹುದಾಗಿದೆ. ಈ ಬಲಗೈ ವೇಗದ ಬೌಲರ್ ಜಿಯೋ ಸಿನಿಮಾದಲ್ಲಿ ಕಾಮೆಂಟರಿ ಮಾಡಲಿದ್ದಾರೆ. ಸದ್ಯ ಇಶಾಂತ್ ಶರ್ಮಾ ಟೀಂ ಇಂಡಿಯಾದಿಂದ ಹೊರಗುಳಿದಿದ್ದು, ಸದ್ಯದಲ್ಲೇ ನಿವೃತ್ತಿಯಾಗಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

4 / 7
ಈ ವರದಿಯ ನಡುವೆ, ಇಶಾಂತ್ ಶರ್ಮಾ ಕಾಮೆಂಟೇಟರ್ ಆಗಿ ಹೊಸ ಪಾತ್ರವನ್ನು ತೆಗೆದುಕೊಳ್ಳಲು ತಯಾರಿ ನಡೆಸಿದ್ದು, ಎಲ್ಲರಿಗೂ ಶಾಕ್ ನೀಡಿದ್ದಾರೆ. ಇಶಾಂತ್ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗದೆ ಕಾಮೆಂಟರಿ ಮಾಡುವುದನ್ನು ನಾವು ವಿಂಡೀಸ್ ಸರಣಿಯಲ್ಲಿ ಕಾಣಬಹುದಾಗಿದೆ.

5 / 7
ಇದಕ್ಕೂ ಮೊದಲು, ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ನಿವೃತ್ತಿಯ ಮೊದಲು ಹಲವಾರು ಸರಣಿಗಳಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಂಡಿದ್ದಾರೆ. ಅದಾಗ್ಯೂ ಕಾರ್ತಿಕ್ ಐಪಿಎಲ್​ನಲ್ಲಿ ಅಬ್ಬರಿಸಿ, ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

6 / 7
ಇಶಾಂತ್ ಶರ್ಮಾ ಭಾರತ ಪರ 105 ಟೆಸ್ಟ್ ಪಂದ್ಯಗಳಲ್ಲಿ 311 ವಿಕೆಟ್ ಪಡೆದಿದ್ದರೆ, 80 ಏಕದಿನ ಪಂದ್ಯಗಳಲ್ಲಿ 115 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಭಾರತದ ಪರ 14 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ iಶಾಂತ್ 8 ವಿಕೆಟ್ ಪಡೆದಿದ್ದಾರೆ. ಇಶಾಂತ್ ಶರ್ಮಾ ಐಪಿಎಲ್‌ನಲ್ಲಿ ಇದುವರೆಗೆ 101 ಪಂದ್ಯಗಳನ್ನು ಆಡಿದ್ದು, 35.05 ಸರಾಸರಿಯಲ್ಲಿ 83 ವಿಕೆಟ್‌ಗಳನ್ನು ಪಡೆದಿದ್ದಾರೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​