ಇದೀಗ ರೋಹಿತ್ ಆಡುವ ಬಗ್ಗೆ ಇನ್ಸೈಡ್ ಸ್ಪೋರ್ಟ್ಸ್ ವರದಿ ಮಾಡಿದ್ದು, ಈ ವರದಿಯ ಪ್ರಕಾರ, ರೋಹಿತ್ ಶರ್ಮಾ ಟೆಸ್ಟ್ ಸರಣಿಯಲ್ಲಿ ತಂಡದ ನಾಯಕತ್ವ ನಿಭಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. “ರೋಹಿತ್ ಫಿಟ್ ಆಗಿದ್ದಾರೆ. ಅಲ್ಲದೆ ತಂಡದ ಆಯ್ಕೆಗೆ ಲಭ್ಯವಿದ್ದಾರೆ. ರೋಹಿತ್‌ಗೆ ವಿಶ್ರಾಂತಿ ಪಡೆಯಲು ಒಂದು ತಿಂಗಳ ಸಮಯವಿದೆ. ಆದ್ದರಿಂದ ರೋಹಿತ್ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇನ್ಸೈಡ್ ಸ್ಪೋರ್ಟ್ಸ್‌ಗೆ ತಿಳಿಸಿದ್ದಾರೆ.