IND vs WI: ಟೆಸ್ಟ್ ಸರಣಿಯಿಂದ ಪೂಜಾರಗೆ ಕೋಕ್, ರೋಹಿತ್ ಶರ್ಮಾಗೆ ಬ್ರೇಕ್? ಬಿಸಿಸಿಐ ಮೂಲಗಳು ಹೇಳಿದ್ದೇನು?

|

Updated on: Jun 21, 2023 | 12:33 PM

IND vs WI: ವಾಸ್ತವವಾಗಿ ತಂಡದ ಹಾಲಿ ನಾಯಕ ರೋಹಿತ್ ಶರ್ಮಾ ಕೆಲಸದ ಹೊರೆಯಿಂದಾಗಿ ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗುತ್ತಿತ್ತು.

1 / 7
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಬಳಿಕ ಟೀಂ ಇಂಡಿಯಾ ಆಟಗಾರರು ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡ ಜುಲೈ ತಿಂಗಳಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿದೆ.

2 / 7
ಜುಲೈ 12 ರಿಂದ ಟೀಂ ಇಂಡಿಯಾ ಪ್ರವಾಸ ಆರಂಭವಾಗಲಿದೆ. ಪ್ರವಾಸವು ಆಗಸ್ಟ್ 13 ರಂದು ಕೊನೆಗೊಳ್ಳಲಿದೆ. ಬಿಸಿಸಿಐ ಕೂಡ ಈ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸೋಲನುಭವಿಸಿದ ನಂತರ, ಟೀಂ ಇಂಡಿಯಾದಲ್ಲಿ ಬದಲಾವಣೆಯ ಚರ್ಚೆ ನಡೆಯುತ್ತಿದೆ.

3 / 7
ಇದರ ಭಾಗವಾಗಿ ಟೆಸ್ಟ್ ತಂಡದ ನಾಯಕತ್ವದ ಬಗ್ಗೆಯೂ ಚರ್ಚೆ ಮುನ್ನಲೆಗೆ ಬಂದಿದೆ. ವಾಸ್ತವವಾಗಿ ತಂಡದ ಹಾಲಿ ನಾಯಕ ರೋಹಿತ್ ಶರ್ಮಾ ಕೆಲಸದ ಹೊರೆಯಿಂದಾಗಿ ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗುತ್ತಿತ್ತು. ಆದ್ದರಿಂದ ಟೆಸ್ಟ್ ಸರಣಿಯಲ್ಲಿ ರೋಹಿತ್ ಬದಲಿಗೆ ಅಜಿಂಕ್ಯ ರಹಾನೆಗೆ ನಾಯಕತ್ವದ ಅವಕಾಶ ನೀಡಲಾಗುವುದು ಎಂದು ಹೇಳಲಾಗುತ್ತಿತ್ತು.

4 / 7
ಇದೀಗ ರೋಹಿತ್ ಆಡುವ ಬಗ್ಗೆ ಇನ್ಸೈಡ್ ಸ್ಪೋರ್ಟ್ಸ್ ವರದಿ ಮಾಡಿದ್ದು, ಈ ವರದಿಯ ಪ್ರಕಾರ, ರೋಹಿತ್ ಶರ್ಮಾ ಟೆಸ್ಟ್ ಸರಣಿಯಲ್ಲಿ ತಂಡದ ನಾಯಕತ್ವ ನಿಭಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. “ರೋಹಿತ್ ಫಿಟ್ ಆಗಿದ್ದಾರೆ. ಅಲ್ಲದೆ ತಂಡದ ಆಯ್ಕೆಗೆ ಲಭ್ಯವಿದ್ದಾರೆ. ರೋಹಿತ್‌ಗೆ ವಿಶ್ರಾಂತಿ ಪಡೆಯಲು ಒಂದು ತಿಂಗಳ ಸಮಯವಿದೆ. ಆದ್ದರಿಂದ ರೋಹಿತ್ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇನ್ಸೈಡ್ ಸ್ಪೋರ್ಟ್ಸ್‌ಗೆ ತಿಳಿಸಿದ್ದಾರೆ.

5 / 7
ಇನ್ನು ರೋಹಿತ್ ಪ್ರದರ್ಶನದ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧಿಕಾರಿ, “ರೋಹಿತ್ ಐಪಿಎಲ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸ್ಕೋರ್ ಮಾಡಲಿಲ್ಲ. ಆದರೆ ಕಳೆದ ಕೆಲವು ತಿಂಗಳುಗಳಲ್ಲಿ ರೋಹಿತ್ ಉತ್ತಮ ಪ್ರದರ್ಶನ ನೀಡಿದ್ದಾರೆ. ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶತಕ ಸಿಡಿಸಿದ್ದರು. ರೋಹಿತ್ ತಮ್ಮ ಫಿಟ್ನೆಸ್ ಮೇಲೆ ಕಣ್ಣಿಟ್ಟಿದ್ದಾರೆ. ಕೇವಲ ಪ್ರದರ್ಶನದ ಆಧಾರದ ಮೇಲೆ ರೋಹಿತ್ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

6 / 7
ಹಾಗೆಯೇ  ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಚೇತೇಶ್ವರ ಪೂಜಾರ ಅವರನ್ನು ಟೆಸ್ಟ್ ತಂಡದಿಂದ ಕೈಬಿಡುವ ಬಗ್ಗೆ ಮಾತು ಕೇಳಿಬಂದಿತ್ತು. ಆದರೆ ಇದೀಗ ಪೂಜಾರ ಆಡುವ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, ಶ್ರೇಯಸ್ ಅಯ್ಯರ್ ಇನ್ನು ಫಿಟ್ ಆಗಿರದ ಕಾರಣ ವಿಂಡೀಸ್ ಸರಣಿಯಲ್ಲೂ ಪೂಜಾರ ಟೆಸ್ಟ್ ತಂಡದಲ್ಲಿ ಆಡಲಿದ್ದಾರೆ ಎಂದು ವರದಿಯಾಗಿದೆ.

7 / 7
ಏತನ್ಮಧ್ಯೆ, ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಈ ಪ್ರವಾಸಕ್ಕೆ ಭಾರತ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.