- Kannada News Photo gallery Cricket photos IND vs WI ODI Squad 2023 Sanju Samson In ODI Squad For vs West Indies Check Full Squad in kannada
IND vs WI: ಶಮಿ ಔಟ್, ಸಂಜು- ರುತುರಾಜ್ ಇನ್! ಹೀಗಿದೆ ಭಾರತ ಏಕದಿನ ತಂಡ
IND vs WI ODI Squad 2023: ಭಾರತ ತಂಡ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಸರಣಿಯನ್ನು ಆಡಲಿದೆ. ಇದಕ್ಕಾಗಿ ಬಿಸಿಸಿಐ ಶುಕ್ರವಾರ 17 ಸದಸ್ಯರ ಏಕದಿನ ತಂಡವನ್ನು ಪ್ರಕಟಿಸಿದೆ.
Updated on:Jun 23, 2023 | 4:53 PM

ಭಾರತ ತಂಡ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಸರಣಿಯನ್ನು ಆಡಲಿದೆ. ಇದಕ್ಕಾಗಿ ಬಿಸಿಸಿಐ ಶುಕ್ರವಾರ 17 ಸದಸ್ಯರ ಏಕದಿನ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಸೆಣಸಲಿದೆ.

ಏಕದಿನ ತಂಡದ ಉಪನಾಯಕತ್ವವನ್ನು ಹಾರ್ದಿಕ್ ಪಾಂಡ್ಯಗೆ ಹಸ್ತಾಂತರಿಸಲಾಗಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್‌ಗೂ ಅವಕಾಶ ನೀಡಲಾಗಿದೆ. ಹಾಗೆಯೇ ವೇಗಿ ಜಯದೇವ್ ಉನದ್ಕಟ್ ಬರೋಬ್ಬರಿ 10 ವರ್ಷಗಳ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ.

ಟೀಂ ಇಂಡಿಯಾ ಮುಂದಿನ ತಿಂಗಳು ಜುಲೈ 27 ರಿಂದ ಆಗಸ್ಟ್ 1 ರವರೆಗೆ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದ್ದು, ಏಕದಿನ ವಿಶ್ವಕಪ್ ತಯಾರಿಯ ದೃಷ್ಟಿಯಿಂದ ಭಾರತಕ್ಕೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ.

2022ರ ನವೆಂಬರ್ನಲ್ಲಿ ಕಿವೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನಾಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಏಕದಿನ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಮತ್ತೊಂದೆಡೆ, ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರುತುರಾಜ್ ಗಾಯಕ್ವಾಡ್ ಏಕದಿನ ತಂಡಕ್ಕೆ ಮರಳಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ರುತುರಾಜ್ಗೆ ಆ ನಂತರ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

ಹಾಗೆಯೇ ವೇಗಿ ಜಯದೇವ್ ಉನದ್ಕಟ್ ಕೂಡ ಬರೋಬ್ಬರಿ 10 ವರ್ಷಗಳ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ. 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಪಂದ್ಯವನ್ನಾಡಿದ್ದ ಉನದ್ಕಟ್, ಆ ವರ್ಷ 7 ಏಕದಿನ ಪಂದ್ಯವನ್ನಾಡಿ 312 ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿತ್ತು. ಇನ್ನುಳಿದಂತೆ ಭಾರತ ಏಕದಿನ ತಂಡ ಹೀಗಿದೆ.

ಟಾಪ್ ಆರ್ಡರ್: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್,

ಮಿಡಲ್ ಆರ್ಡರ್: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್,

ವಿಕೆಟ್ ಕೀಪರ್ಸ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್,

ಆಲ್ರೌಂಡರ್ಸ್: ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್,

ಬೌಲಿಂಗ್ ವಿಭಾಗ: ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್,ಉಮ್ರಾನ್ ಮಲಿಕ್, ಮುಖೇಶ್ ಕುಮಾರ್
Published On - 4:50 pm, Fri, 23 June 23



















