Updated on: Jul 25, 2023 | 10:13 AM
ಪೋರ್ಟ್ ಆಫ್ ಸ್ಪೇನ್ನ ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ಮತ್ತು ಎರಡನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ ಕಂಡಿದೆ.
ಸತತವಾಗಿ ಸುರಿದ ಮಳೆಯಿಂದಾಗಿ ಎರಡನೇ ಟೆಸ್ಟ್ನ ಐದನೇ ದಿನದಾಟ ಒಂದೂ ಎಸೆತ ಕಾಣದೆ ಕೊನೆಗೊಂಡಿತು. ಹೀಗಾಗಿ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಗಿದೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 141 ರನ್ಗಳ ಇನ್ನಿಂಗ್ಸ್ ಜಯ ಸಾಧಿಸಿದ ಪರಿಣಾಮ 1-0 ಮುನ್ನಡೆ ಪಡೆದುಕೊಂಡು ಟೆಸ್ಟ್ ಸರಣಿಯನ್ನು ತನ್ನದಾಗಿಸಿದೆ.
ಇದೀಗ ಟೆಸ್ಟ್ ಸರಣಿ ಬಳಿಕ ಉಭಯ ತಂಡಗಳು ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಭಾರತ- ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜಿಸಲಾಗಿದೆ.
ಇಂಡೋ- ವಿಂಡೀಸ್ ಮೊದಲ ಏಕದಿನ ಬಾರ್ಬಡೊಸ್ನ ಕೆನ್ನಿಂಗ್ಟನ್ ಓವಲ್ನಲ್ಲಿ ಜುಲೈ 27ಕ್ಕೆ ನಡೆಯಲಿದೆ. ದ್ವಿತೀಯ ಏಕದಿನ ಕೂಡ ಇದೇ ಮೈದಾನದಲ್ಲಿ ಜುಲೈ 29 ರಂದು ಆಯೋಜಿಸಲಾಗಿದೆ. ಅಂತಿಮ ಮೂರನೇ ಏಕದಿನ ಟ್ರಿನಿಡಾಡ್ನ ಬ್ರಿಯನ್ ಲಾರ ಸ್ಟೇಡಿಯಂನಲ್ಲಿ ಆಗಸ್ಟ್ 1 ರಂದು ನಿಗದಿ ಮಾಡಲಾಗಿದೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೂರೂ ಪಂದ್ಯಗಳ ಏಕದಿನ ಸರಣಿ ಅಲ್ಲಿನ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ. ಅದೇ ಭಾರತದ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ಉಮ್ರಾನ್ ಮಲಿಕ್.
ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಜೆ, ಯಾನಿಕ್ ಕರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರೊನ್ ಹೆಟ್ಮೇರ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋಟಿ, ಜೇಡನ್ ಸಿನ್‌ಸ್, ರೊಮರಿಯೊಕ್ಲ್, ರೊಮರಿಯೊಕ್ಲ್, ರೊಮರಿಯೊಕ್ಲ್.