IND vs WI: 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬರೆದ ಪ್ರಮುಖ ದಾಖಲೆಗಳಿವು
IND vs WI: ಸತತ ಎರಡು ಟಿ20 ಪಂದ್ಯಗನ್ನು ಗೆದ್ದಿರುವ ಭಾರತ ಸರಣಿಯನ್ನು 2-2ರಿಂದ ಸಮಬಲಗೊಳಿಸಿದೆ. ಇದೀಗ ಆಗಸ್ಟ್ 13ರ ಭಾನುವಾರದಂದು ನಡೆಯಲಿರುವ ನಿರ್ಣಾಯಕ ಐದನೇ ಪಂದ್ಯದಲ್ಲಿ ಸರಣಿ ವಿಜೇತರ ನಿರ್ಧಾರವಾಗಲಿದೆ. ಇನ್ನು ಫ್ಲೋರಿಡಾದಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದ್ದು, ಇದರೊಂದಿಗೆ ಕೆಲವು ವಿಶೇಷ ದಾಖಲೆಗಳನ್ನು ನಿರ್ಮಿಸಿದೆ.
1 / 7
ಆಗಸ್ಟ್ 12ರ ಶನಿವಾರದಂದು ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯ ಟೀಂ ಇಂಡಿಯಾಗೆ ಅತ್ಯಂತ ಮಹತ್ವದ್ದಾಗಿತ್ತು. ಈ ಪಂದ್ಯದಲ್ಲಿ ಭಾರತ ಸೋತಿದ್ದರೆ, ಬರೋಬ್ಬರಿ 7 ವರ್ಷಗಳ ನಂತರ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಸರಣಿ ಸೋತ ಬೇಡದ ದಾಖಲೆ ಬರೆಯುತ್ತಿತ್ತು. ಆದರೆ ಇದಕ್ಕೆ ಟೀಂ ಇಂಡಿಯಾ ಆಟಗಾರರು ಅವಕಾಶ ನೀಡಲಿಲ್ಲ.
2 / 7
ಸತತ ಎರಡು ಟಿ20 ಪಂದ್ಯಗನ್ನು ಗೆದ್ದಿರುವ ಭಾರತ ಸರಣಿಯನ್ನು 2-2ರಿಂದ ಸಮಬಲಗೊಳಿಸಿದೆ. ಇದೀಗ ಆಗಸ್ಟ್ 13ರ ಭಾನುವಾರದಂದು ನಡೆಯಲಿರುವ ನಿರ್ಣಾಯಕ ಐದನೇ ಪಂದ್ಯದಲ್ಲಿ ಸರಣಿ ವಿಜೇತರ ನಿರ್ಧಾರವಾಗಲಿದೆ. ಇನ್ನು ಫ್ಲೋರಿಡಾದಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದ್ದು, ಇದರೊಂದಿಗೆ ಕೆಲವು ವಿಶೇಷ ದಾಖಲೆಗಳನ್ನು ನಿರ್ಮಿಸಿದೆ.
3 / 7
ವಿಂಡೀಸ್ ನೀಡಿದ179 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನತ್ತಿದ ಭಾರತ ಈ ಗೆಲುವಿನೊಂದಿಗೆ ಫ್ಲೋರಿಡಾದ ಈ ಮೈದಾನದಲ್ಲಿ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಅತಿ ಹೆಚ್ಚು ರನ್ ಚೇಸ್ ಮಾಡಿದ ದಾಖಲೆ ಬರೆದಿದೆ.
4 / 7
ಅಲ್ಲದೆ ಫ್ಲೋರಿಡಾದಲ್ಲಿ ಇದುವರೆಗೆ 7 ಪಂದ್ಯಗಳನ್ನಾಡಿರುವ ಭಾರತ ಇದರಲ್ಲಿ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಈ ಮೈದಾನದಲ್ಲಿ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
5 / 7
4ನೇ ಪಂದ್ಯದಲ್ಲಿ 165 ರನ್ ಜೊತೆಯಾಟವನ್ನಾಡಿದ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಜೋಡಿ ಭಾರತದ ಪರ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಅತಿ ದೊಡ್ಡ ಆರಂಭಿಕ ಜೊತೆಯಾಟ ನಡೆಸಿದ ಜಂಟಿ ದಾಖಲೆಯನ್ನು ಬರೆಯಿತು. ಇದಕ್ಕೂ ಮುನ್ನ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಕೂಡ 165 ರನ್‌ಗಳ ಜೊತೆಯಾಟವಾಡಿದ್ದರು.
6 / 7
ಯಶಸ್ವಿ ಜೈಸ್ವಾಲ್ (ಔಟಾಗದೆ 84) ತಮ್ಮ ಎರಡನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸುವುದರೊಂದಿಗೆ ಅತಿ ಕಿರಿಯ ವಯಸ್ಸಿನಲ್ಲಿ ಅಂದರೆ, 20 ವರ್ಷ 227 ದಿನಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು.
7 / 7
150ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಟೀಂ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ ಅಥವಾ ಕೇವಲ 1 ವಿಕೆಟ್ ನಷ್ಟಕ್ಕೆ ಸಾಧಿಸಿದ ಮೊದಲ ಅಂತಾರಾಷ್ಟ್ರೀಯ ಟಿ20 ಪಂದ್ಯ ಇದಾಗಿದೆ.