ಟೀಮ್ ಇಂಡಿಯಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ವಿಂಡೀಸ್ ಪಡೆಗೆ ಆಘಾತ
India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಹಮದಾಬಾದ್ ಹಾಗೂ ದೆಹಲಿಯಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳನ್ನು ಈಗಾಗಲೇ ಘೋಷಿಸಲಾಗಿದೆ.
Updated on: Sep 27, 2025 | 10:09 AM

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ವಿಂಡೀಸ್ ಪಡೆಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಶಮರ್ ಜೋಸೆಫ್ (Shamar Joseph) ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರುಗಳಿದಿದ್ದಾರೆ.

ಶಮರ್ ಜೋಸೆಫ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಭಾರತದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಅವರು ಅಲಭ್ಯರಾಗಿದ್ದಾರೆ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಅಲ್ಲದೆ ಶಮರ್ ಬದಲಿಗೆ 22 ವರ್ಷ ಪೇಸ್ ಬೌಲಿಂಗ್ ಆಲ್ರೌಂಡರ್ ಜೋಹಾನ್ ಲೇನ್ ಅವರನ್ನು ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವೆಸ್ಟ್ ಇಂಡೀಸ್ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬೌಲರ್ ಶಮರ್ ಜೋಸೆಫ್. ಈವರೆಗೆ 11 ಟೆಸ್ಟ್ ಪಂದ್ಯಗಳನ್ನಾಡಿರುವ ಶಮರ್ ಒಟ್ಟು 44 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದೀಗ ಭಾರತದ ವಿರುದ್ಧದ ಪ್ರಮುಖ ಸರಣಿಗೆ ಅವರು ಅಲಭ್ಯರಾಗಿರುವುದು ವಿಂಡೀಸ್ ಪಾಲಿಗೆ ಹಿನ್ನಡೆ ಎಂದೇ ಹೇಳಬಹುದು. ಇನ್ನು ಈ ಸರಣಿಗೆ ಆಯ್ಕೆಯಾದ ಉಭಯ ತಂಡಗಳ ಈ ಕೆಳಗಿನಂತಿದೆ...

ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್ನರೈನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).




