IND vs WI: ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯವನ್ನಾಡಲ್ಲಿದ್ದಾರೆ ಈ ಮೂವರು ಕ್ರಿಕೆಟಿಗರು..!
IND vs WI: ಟೀಂ ಇಂಡಿಯಾ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಟೆಸ್ಟ್ ಸರಣಿಯನ್ನು ಆಡಿತ್ತು. ಇದೀಗ ಜುಲೈ 12 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ.
1 / 6
ನಾಲ್ಕು ವರ್ಷಗಳ ನಂತರ, ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗುತ್ತಿವೆ. ಟೀಂ ಇಂಡಿಯಾ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಟೆಸ್ಟ್ ಸರಣಿಯನ್ನು ಆಡಿತ್ತು. ಇದೀಗ ಜುಲೈ 12 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ.
2 / 6
ಟೆಸ್ಟ್ ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್ ಅಷ್ಟು ಪರಿಣಾಮಕಾರಿ ತಂಡವಲ್ಲದ ಕಾರಣ ಟೀಂ ಇಂಡಿಯಾ ಪರ ಹಲವು ಹೊಸ ಮುಖಗಳು ಟೆಸ್ಟ್ ಕ್ರಿಕೆಟ್‌ನಲ್ಲಿ ಪದಾರ್ಪಣೆ ಮಾಡಲಿವೆ. ಅದರಲ್ಲಿ ಯಶಸ್ವಿ ಜೈಸ್ವಾಲ್ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುವುದು ಖಚಿತವಾಗಿದ್ದರೂ, ಇನ್ನೂ ಇಬ್ಬರು ಆಟಗಾರರು ಟೀಂ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನಾಡುವ ಸಾಧ್ಯತೆಗಳಿವೆ.
3 / 6
ಯಶಸ್ವಿ ಜೈಸ್ವಾಲ್: ಅಭ್ಯಾಸ ಪಂದ್ಯದಲ್ಲಿ ಜೈಸ್ವಾಲ್ರನ್ನು ಆರಂಭಿಕ ಕಣಕ್ಕಳಿಸಿದ್ದ ಟೀಂ ಇಂಡಿಯಾ ಮ್ಯಾನೇಜ್ಮೆಂಟ್, ಈ ಯುವ ಬ್ಯಾಟರ್ ಅನ್ನು ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿಸುವ ಸುಳಿವನ್ನು ಮುಂಚೆಯೇ ಬಿಟ್ಟುಕೊಟ್ಟಿದೆ. ಹೀಗಾಗಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದರೆ ಶುಭ್ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಗಳಿವೆ.
4 / 6
ವಾಸ್ತವವಾಗಿ ಟೆಸ್ಟ್ ಸರಣಿಗೆ ತಂಡವನ್ನು ಪ್ರಕಟಿಸುವಾಗ ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಆರಂಭಿಕ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಅಭ್ಯಾಸ ಪಂದ್ಯದಲ್ಲಿ ರುತುರಾಜ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ರುತುರಾಜ್ ಬದಲಿಗೆ ಯಶಸ್ವಿ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
5 / 6
ಇಶಾನ್ ಕಿಶನ್: ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಸ್ಥಾನಕ್ಕೆ ಸಾಕಷ್ಟು ಪೈಪೋಟಿ ಇದೆ. ಕೆಎಸ್ ಭರತ್ ತಮ್ಮ ವಿಕೆಟ್ ಕೀಪಿಂಗ್ ಕೌಶಲ್ಯದಿಂದ ಎಲ್ಲರನ್ನೂ ಮೆಚ್ಚಿಸಿದ್ದಾರೆ. ಆದರೆ ಬ್ಯಾಟಿಂಗ್ನಲ್ಲಿ ಅವರ ಪ್ರದರ್ಶನ ಚೆನ್ನಾಗಿಲ್ಲ. ಹೀಗಾಗಿ ತಂಡದ ಆಡಳಿತ ಮಂಡಳಿಯೂ ಇಶಾನ್ ಕಿಶನ್‌ಗೆ ಚೊಚ್ಚಲ ಅವಕಾಶ ನೀಡುವ ಸಾಧ್ಯತೆಗಳಿವೆ.
6 / 6
ಮುಖೇಶ್ ಕುಮಾರ್: ಈ ಸರಣಿಯಲ್ಲಿ ಭಾರತದ ಪರ ಚೊಚ್ಚಲ ಪಂದ್ಯವನ್ನಾಡುವ ಮೂರನೇ ಆಟಗಾರನೆಂದರೆ ಅದು ಮುಖೇಶ್ ಕುಮಾರ್. ಮೊದಲ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಜಯದೇವ್ ಉನದ್ಕಟ್ ಆಡುವುದು ಖಚಿತವಾಗಿದೆ. ಹೀಗಾಗಿ ಮುಖೇಶ್, ಶಾರ್ದೂಲ್ ಠಾಕೂರ್ ಮತ್ತು ನವದೀಪ್ ಸೈನಿ ನಡುವೆ ಮೂರನೇ ಸ್ಥಾನಕ್ಕಾಗಿ ಪೈಪೋಟಿ ನಡೆದಿದೆ. ಪ್ರಸ್ತುತ ಮುಖೇಶ್ ಫಾರ್ಮ್‌ನಲ್ಲಿರುವುದರಿಂದ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.