ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಬರಿಗೈಯಲ್ಲಿ ತವರಿಗೆ ಮರಳಿದ್ದ ಟೀಂ ಇಂಡಿಯಾ ಇದೀಗ ಒಂದು ತಿಂಗಳ ವಿರಾಮದ ನಂತರ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದೆ. ಜುಲೈ 12 (ಬುಧವಾರ) ರಂದು 2 ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗುವ ಪೂರ್ಣ ಪ್ರಮಾಣದ ಪ್ರವಾಸದಲ್ಲಿ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲು ಸಿದ್ಧವಾಗಿದೆ.