Updated on: Feb 19, 2022 | 2:17 PM
ವೆಸ್ಟ್ ಇಂಡೀಸ್ ವಿರುದ್ದ 2ನೇ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 39 ಎಸೆತಗಳಲ್ಲಿ ಕೊಹ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಅಂತಿಮವಾಗಿ 41 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ನೊಂದಿಗೆ 52 ರನ್ ಬಾರಿಸಿದರು.
ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 30 ಅರ್ಧಶತಕ ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಯನ್ನು ಬರೆದರು. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಅತೀ ವೇಗವಾಗಿ 30 ಬಾರಿ 50+ ಸ್ಕೋರ್ಗಳಿದ ಬ್ಯಾಟ್ಸ್ಮನ್ ಎಂಬ ಹಿರಿಮೆಗೂ ಪಾತ್ರರಾದರು.
ಇದಕ್ಕೂ ಮುನ್ನ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್ಮ್ಯಾನ್ 113 ಇನಿಂಗ್ಸ್ಗಳಲ್ಲಿ 26 ಅರ್ಧಶತಕ+4 ಶತಕ ಬಾರಿಸುವ ಮೂಲಕ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿದ ಆಟಗಾರ ಎನಿಸಿಕೊಂಡಿದ್ದರು.
ಇದೀಗ 30 ಬಾರಿ 50+ ಸ್ಕೋರ್ಗಳಿಸುವ ವಿರಾಟ್ ಕೊಹ್ಲಿ ಹಿಟ್ಮ್ಯಾನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೆ ಕೇವಲ 89 ಇನಿಂಗ್ಸ್ ಈ ಸಾಧನೆ ಮಾಡುವ ಮೂಲಕ ಕಡಿಮೆ ಇನಿಂಗ್ಸ್ಗಳಲ್ಲಿ 50+ ಸ್ಕೋರ್ಗಳಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ನಿರ್ಮಿಸಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬಾರ್ ಆಜಂ ಇದ್ದು, ಬಾಬರ್ 26 ಬಾರಿ ಅರ್ಧಶತಕ ಬಾರಿಸಿದ್ದಾರೆ. ಒಟ್ಟಿನಲ್ಲಿ ಫಾರ್ಮ್ ಕಳೆದುಕೊಂಡಿದ್ದ ಕೊಹ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.