- Kannada News Photo gallery Cricket photos IND vs WI Virat Kohli hits his 29th test century and broke many records
Virat Kohli Century: ಐತಿಹಾಸಿಕ ಟೆಸ್ಟ್ನಲ್ಲಿ ಶತಕ ಸಿಡಿಸಿ ಮೂವರು ಕ್ರಿಕೆಟ್ ದಿಗ್ಗಜರ ದಾಖಲೆ ಮುರಿದ ವಿರಾಟ್..!
Virat Kohli Century: 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ, ಐತಿಹಾಸಿಕ ಪಂದ್ಯದಲ್ಲಿ 29ನೇ ಟೆಸ್ಟ್ ಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ಕ್ರಿಕೆಟ್ ಲೋಕದ ಹಲವು ದಿಗ್ಗಜರ ದಾಖಲೆಯನ್ನು ಮುರಿದಿದ್ದಾರೆ.
Updated on:Jul 22, 2023 | 6:39 AM

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ, ಐತಿಹಾಸಿಕ ಪಂದ್ಯದಲ್ಲಿ 29ನೇ ಟೆಸ್ಟ್ ಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ಕ್ರಿಕೆಟ್ ಲೋಕದ ಹಲವು ದಿಗ್ಗಜರ ದಾಖಲೆಯನ್ನು ಮುರಿದಿದ್ದಾರೆ.

ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ನ ಎರಡನೇ ದಿನದಾಟದಲ್ಲಿ 180 ಎಸೆತಗಳನ್ನು ಎದುರಿಸಿ ತಮ್ಮ ಶತಕ ಪೂರ್ಣಗೊಳಿಸಿದ ಕೊಹ್ಲಿ, ಜಡೇಜಾ ಅವರೊಂದಿಗೆ ಶತಕದ ಜೊತೆಯಾಟವನ್ನು ಹಂಚಿಕೊಂಡರು. ಹೀಗಾಗಿ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 438 ರನ್ ಕಲೆಹಾಕಿತು.

ಇನ್ನು ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ 76ನೇ ಟೆಸ್ಟ್ ಶತಕ ಸಿಡಿಸಿದ ವಿರಾಟ್, 500 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 75 ಶತಕ ಸಿಡಿಸಿದ್ದ ಭಾರತದ ಸಚಿನ್ ತೆಂಡೂಲ್ಕರ್ ಅವರನ್ನು ಶತಕಗಳ ವಿಚಾರದಲ್ಲಿ ಹಿಂದಿಕ್ಕಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ 12ನೇ ಶತಕ ಸಿಡಿಸಿದ ಕೊಹ್ಲಿ, ಕೆರಿಬಿಯನ್ನರ ವಿರುದ್ಧ ಅತಿ ಹೆಚ್ಚು ಆತಕ ಸಿಡಿಸಿದವರ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಹಾಗೆಯೇ ತಮ್ಮ 12ನೇ ಶತಕದ ಮೂಲಕ ವಿಂಡೀಸ್ ವಿರುದ್ಧ 11 ಶತಕ ಸಿಡಿಸಿದ್ದ ಆರ್ಸಿಬಿ ತಂಡದ ಮಾಜಿ ಆಟಗಾರ ಹಾಗೂ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್ರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಅಂದರೆ 13 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿರುವ ಸುನಿಲ್ ಗವಾಸ್ಕರ್ ಅವರನ್ನು ಹಿಂದಿಕ್ಕಲು ಕೊಹ್ಲಿಗೆ ಇನ್ನೊಂದು ಶತಕದ ಅವಶ್ಯಕತೆ ಇದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಎರಡನೇ ಇನ್ನಿಂಗ್ಸ್ ಆಡುವಂತ್ತಾದರೆ, ಆಗ ಕೊಹ್ಲಿಗೆ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಮುರಿಯುವ ಅವಕಾಶವಿದೆ.

ತಮ್ಮ 29ನೇ ಟೆಸ್ಟ್ ಶತಕ ಪೂರ್ಣಗೊಳಿಸಿದ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದು ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದವರ ಪಟ್ಟಿಯಲ್ಲಿ ವಿಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಇದು ಕೊಹ್ಲಿ ಅವರ 25ನೇ ಟೆಸ್ಟ್ ಶತಕವಾಗಿದೆ.
Published On - 6:36 am, Sat, 22 July 23
























