Virat Kohli: 500ನೇ ಅಂತಾರಾಷ್ಟ್ರೀಯ ಪಂದ್ಯ; ಕಿಂಗ್ ಕೊಹ್ಲಿ ದಾಖಲೆಗಳ ಕಿರೀಟಕ್ಕೆ ಮತ್ತೊಂದು ಗರಿ..!

|

Updated on: Jul 17, 2023 | 8:06 AM

IND vs WI 2nd Test: ವಾಸ್ತವವಾಗಿ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುವ ಎರಡನೇ ಟೆಸ್ಟ್ ಪಂದ್ಯ ಕಿಂಗ್ ಕೊಹ್ಲಿ ವೃತ್ತಿ ಬದುಕಿನ 500 ನೇ ಅಂತಾರಾಷ್ಟ್ರೀಯ ಪಂದ್ಯವಾಗಿರಲಿದೆ.

1 / 9
ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿರುವ ಟೀಂ ಇಂಡಿಯಾ, ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಹಾಗೂ 141 ರನ್​ಗಳ ಗೆಲುವು ಸಾಧಿಸಿದೆ. ಇದೀಗ ಎರಡನೇ ಟೆಸ್ಟ್ ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ತವಕದಲ್ಲಿ ರೋಹಿತ್ ಪಡೆ ಇದೆ.

2 / 9
ಇದೀಗ  ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಜುಲೈ 20 ರಂದು ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗಲಿದೆ. ಇದೇ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಕಿಂಗ್ ಕೊಹ್ಲಿ ಹೊಸ ದಾಖಲೆಯೊಂದನ್ನು ಬರೆಯುವ ಹೊಸ್ತಿಲಿನಲ್ಲಿದ್ದಾರೆ.

3 / 9
ವಾಸ್ತವವಾಗಿ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುವ ಎರಡನೇ ಟೆಸ್ಟ್ ಪಂದ್ಯ ಕಿಂಗ್ ಕೊಹ್ಲಿ ವೃತ್ತಿ ಬದುಕಿನ 500 ನೇ ಅಂತಾರಾಷ್ಟ್ರೀಯ ಪಂದ್ಯವಾಗಿರಲಿದೆ. ಇದರೊಂದಿಗೆ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಕೆಲವೇ ಕೆಲವು ಆಟಗಾರರಲ್ಲಿ ಕಿಂಗ್ ಕೊಹ್ಲಿ ಕೂಡ ಒಬ್ಬರಾಗಲಿದ್ದಾರೆ.

4 / 9
ಮೂರು ಮಾದರಿಯ ಕ್ರಿಕೆಟ್​ನಲ್ಲೂ ಕಣಕ್ಕಿಳಿದಿರುವ ಕೊಹ್ಲಿ ಇದುವರೆಗೆ 110 ಟೆಸ್ಟ್, 274 ಏಕದಿನ ಹಾಗೂ 115 ಟಿ20 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ.

5 / 9
ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಕಣಕ್ಕಿಳಿಯುತ್ತಿದ್ದಂತೆ 500 ಪಂದ್ಯಗಳನ್ನಾಡಿದ ಸಾಧನೆ ಬರೆಯಲ್ಲಿರುವ ಕೊಹ್ಲಿ, ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆಯಲ್ಲಿದ್ದಾರೆ.

6 / 9
ಹಾಗೆಯೇ ಟೀಂ ಇಂಡಿಯಾ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ 4ನೇ ಆಟಗಾರ ಎಂಬ ಖ್ಯಾತಿಗೂ ಕೊಹ್ಲಿ ಭಾಜನರಾಗಲಿದ್ದಾರೆ. ಇನ್ನು ಕೊಹ್ಲಿಗೂ ಮುನ್ನ ಈ ಸಾಧನೆ ಮಾಡಿದ ಭಾರತದ ಉಳಿದ ಮೂವರು ಬ್ಯಾಟರ್​ಗಳು ಯಾರು ಎಂಬುದನ್ನು ನೋಡುವುದಾದರೆ.

7 / 9
ಸಚಿನ್ ತೆಂಡೂಲ್ಕರ್ 664 ಪಂದ್ಯ

ಸಚಿನ್ ತೆಂಡೂಲ್ಕರ್ 664 ಪಂದ್ಯ

8 / 9
ಎಂಎಸ್ ಧೋನಿ 538 ಪಂದ್ಯ

ಎಂಎಸ್ ಧೋನಿ 538 ಪಂದ್ಯ

9 / 9
ರಾಹುಲ್ ದ್ರಾವಿಡ್ 509 ಪಂದ್ಯ

ರಾಹುಲ್ ದ್ರಾವಿಡ್ 509 ಪಂದ್ಯ