IND vs WI: 2ನೇ ಟಿ20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್​ಗೆ ಸಿಗುತ್ತಾ ಅವಕಾಶ..?

| Updated By: ಪೃಥ್ವಿಶಂಕರ

Updated on: Aug 05, 2023 | 12:42 PM

Yashashvi Jaiswal: ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್​ಗೆ ಚೊಚ್ಚಲ ಟಿ20 ಪಂದ್ಯವನ್ನಾಡುವ ಅವಕಾಶ ಸಿಗುವ ಸಾಧ್ಯತೆಗಳಿವೆ.

1 / 8
ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾಕ್ಕೆ ಸರಣಿಯಲ್ಲಿ ಉತ್ತಮ ಆರಂಭ ಸಿಕ್ಕಿಲ್ಲ. ಆಡಿದ ಮೊದಲ ಪಂದ್ಯದಲ್ಲಿ 150 ರನ್ ಬೆನ್ನಟ್ಟಲಾಗದೆ, 5 ರನ್​ಗಳಿಂದ ಸೋಲೊಪ್ಪಿಕೊಂಡಿದ್ದ ಭಾರತ ಇದೀಗ ಎರಡನೇ ಟಿ20 ಸರಣಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ.

2 / 8
ಉಭಯ ತಂಡಗಳ ನಡುವಣ ಎರಡನೇ ಪಂದ್ಯ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಭಾನುವಾರ ಅಂದರೆ, ಆಗಸ್ಟ್ 6 ರಂದು ನಡೆಯಲ್ಲಿದೆ. ಮೊದಲ ಪಂದ್ಯದಲ್ಲಿ ಭಾರತದ ಸೋಲಿಗೆ ಪ್ರಮುಖ ಕಾರಣವಾಗಿದ್ದು, ತಂಡದ ಕಳಪೆ ಬ್ಯಾಟಿಂಗ್ ಅದರಲ್ಲೂ ತಂಡದ ಆರಂಭಿಕರಿಬ್ಬರು ಒಂದಂಕಿಗೆ ಸುಸ್ತಾಗಿದ್ದರು.

3 / 8
ಹೀಗಾಗಿ ಎರಡನೇ ಟಿ20 ಪಂದ್ಯದಲ್ಲಿ ತಂಡದಲ್ಲಿ ಆರಂಭಿಕರಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿದ್ದು, ಇದೇ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್​ಗೆ ಚೊಚ್ಚಲ ಟಿ20 ಪಂದ್ಯವನ್ನಾಡುವ ಅವಕಾಶ ಸಿಗುವ ಸಾಧ್ಯತೆಗಳಿವೆ.

4 / 8
ಟಿ20 ಸರಣಿಗೂ ಮುನ್ನ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆ ಹಾಕಿದ್ದ ಜೈಸ್ವಾಲ್, ಮೊದಲ ಟೆಸ್ಟ್​ನಲ್ಲಿ 171 ರನ್ ಬಾರಿಸಿದ್ದರು. ಆ ಬಳಿಕ ಎರಡನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ 57 ರನ್ ಹಾಗೂ ಎರಡನೇ ಇನ್ನಿಂಗ್ಸ್​ನಲ್ಲಿ 38 ರನ್ ಸಿಡಿಸಿದ್ದರು.

5 / 8
ಈ ವರ್ಷ ಅದ್ಭುತ ಫಾರ್ಮ್​ನಲ್ಲಿರುವ ಜೈಸ್ವಾಲ್ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಅಸಾಧಾರಣ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸಿದ ಜೈಸ್ವಾಲ್, ಪವರ್‌ಪ್ಲೇ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡಕ್ಕೆ ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾಗಿದ್ದರು.

6 / 8
ಅಲ್ಲದೆ ಕೆಲವು ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಡುವಲ್ಲಿ ಜೈಸ್ವಾಲ್ ತಂಡಕ್ಕೆ ನೆರವಾಗಿದ್ದರು. ಹೀಗಾಗಿ ಚುಟುಕು ಮಾದರಿಯಲ್ಲಿ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಜೈಸ್ವಾಲ್​ಗೆ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಕದ ತೆರೆಯಲ್ಲಿದೆ ಎಂದು ಹೇಳಲಾಗುತ್ತಿದೆ.

7 / 8
ಇದಕ್ಕೆ ಪೂರಕವಾಗಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಆರಂಭಿಕರಾಗಿ ಸತತ ವೈಫಲ್ಯ ಅನುಭವಿಸುತ್ತಿರುವ ಶುಭ್​ಮನ್ ಗಿಲ್ ಆರಂಭಿಕ ಸ್ಥಾನದಿಂದ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಗಳಿದ್ದು, ಇಶಾನ್ ಕಿಶನ್ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

8 / 8
2ನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.