IND vs WI: ಯಶಸ್ವಿ- ಗಿಲ್ ಜೊತೆಯಾಟಕ್ಕೆ ರೋಹಿತ್- ರಾಹುಲ್ ದಾಖಲೆ ಉಡೀಸ್..!
IND vs WI: ಈ ಪಂದ್ಯದಲ್ಲಿ 165 ರನ್‌ಗಳ ದಾಖಲೆಯ ಜೊತೆಯಾಟವನ್ನಾಡಿದ ಗಿಲ್- ಜೈಸ್ವಾಲ್ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಆರಂಭಿಕ ಜೊತೆಯಾಟವನ್ನಾಡಿದ ವಿಚಾರದಲ್ಲಿ ಭಾರತದ ಹಿರಿಯ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರ ಆರು ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ.
1 / 8
ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 9 ವಿಕೆಟ್ಗಳ ಜಯಭೇರಿ ಬಾರಿಸಿದೆ. ವಿಂಡೀಸ್ ನೀಡಿದ 179 ರನ್‌ಗಳ ಗುರಿ ಬೆನ್ನತ್ತಿದ ಭಾರತ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಅರ್ಧಶತಕದ ನೆರವಿನಿಂದ ಇನ್ನು 18 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.
2 / 8
ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ 165 ರನ್‌ಗಳ ಬೃಹತ್ ಆರಂಭಿಕ ಜೊತೆಯಾಟದೊಂದಿಗೆ 2017 ರಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಸೃಷ್ಟಿಸಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.
3 / 8
ವಾಸ್ತವವಾಗಿ ಈ ಪಂದ್ಯದಲ್ಲಿ 165 ರನ್‌ಗಳ ದಾಖಲೆಯ ಜೊತೆಯಾಟವನ್ನಾಡಿದ ಗಿಲ್- ಜೈಸ್ವಾಲ್ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಆರಂಭಿಕ ಜೊತೆಯಾಟವನ್ನಾಡಿದ ವಿಚಾರದಲ್ಲಿ ಭಾರತದ ಹಿರಿಯ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರ ಆರು ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ.
4 / 8
ಈ ಹಿಂದೆ ಅಂದರೆ 2017 ರಲ್ಲಿ ರೋಹಿತ್ ಮತ್ತು ರಾಹುಲ್ ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ 165 ರನ್‌ಗಳ ಆರಂಭಿಕ ಜೊತೆಯಾಟವನ್ನಾಡಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಗಿಲ್- ಜೈಸ್ವಾಲ್ ಜೋಡಿ ಸರಿಗಟ್ಟುದೆ.
5 / 8
ಇನ್ನು 2018 ರಲ್ಲಿ ಇದೇ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಐರ್ಲೆಂಡ್ ವಿರುದ್ಧ 160 ರನ್ ಜೊತೆಯಾಟವನ್ನಾಡಿದ್ದು, ಎರಡನೇ ಅತ್ಯಧಿಕ ಆರಂಭಿಕ ಜೊತೆಯಾಟ ಎಂಬ ದಾಖಲೆಯಾಗಿದೆ.
6 / 8
2017 ರಲ್ಲಿ ಮತ್ತೊಮ್ಮೆ ನ್ಯೂಜಿಲೆಂಡ್ ವಿರುದ್ಧ 158 ರನ್‌ಗಳ ಜೊತೆಯಾಟವನ್ನಾಡಿದ್ದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ.
7 / 8
ಹಾಗೆಯೇ 2021 ರಲ್ಲಿ ಅಫ್ಘಾನಿಸ್ತಾನ ವಿರುದ್ಧ 140 ರನ್‌ಗಳ ಆರಂಭಿಕ ಜೊತೆಯಾಟ ಆಡುವುದರೊಂದಿಗೆ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
8 / 8
ಇದಲ್ಲದೆ ಜೈಸ್ವಾಲ್ ಮತ್ತು ಗಿಲ್ ಅವರ ಜೊತೆಯಾಟವು ಯಾವುದೇ ವಿಕೆಟ್‌ಗೆ ಭಾರತೀಯ ಜೋಡಿಯ ಜಂಟಿ-ಎರಡನೇ ಜೊತೆಯಾಟವಾಗಿದೆ. 2022 ರಲ್ಲಿ ಐರ್ಲೆಂಡ್ ವಿರುದ್ಧ ಎರಡನೇ ವಿಕೆಟ್‌ಗೆ ಸಂಜು ಸ್ಯಾಮ್ಸನ್ ಮತ್ತು ದೀಪಕ್ ಹೂಡಾ ಅವರ 176 ರನ್ ಜೊತೆಯಾಟವು ಟಿ20 ಮಾದರಿಯಲ್ಲಿ ಭಾರತದ ಪರ ಅತ್ಯಧಿಕ ಜೊತೆಯಾಟದ ದಾಖಲೆಯಾಗಿದೆ.