- Kannada News Photo gallery Cricket photos Ind vs Zim 3rd t20 Washington Sundar won first ever Player of the match award
IND vs ZIM: 7 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಈ ಪ್ರಶಸ್ತಿ ಗೆದ್ದ ವಾಷಿಂಗ್ಟನ್ ಸುಂದರ್
IND vs ZIM: ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದರು. ಈ ಅಮೋಘ ಪ್ರದರ್ಶನಕ್ಕಾಗಿ ಸುಂದರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರೊಂದಿಗೆ 2017 ರಿಂದ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ವಾಷಿಂಗ್ಟನ್ ಸುಂದರ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದರು.
Updated on:Jul 11, 2024 | 4:15 PM

ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಸರಣಿಯ ಮೂರನೇ ಪಂದ್ಯವನ್ನು ಭಾರತ ತಂಡ 23 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯ ಟೀಂ ಇಂಡಿಯಾ ಪರ ಬೌಲಿಂಗ್ನಲ್ಲಿ ಮಿಂಚಿದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ತಮ್ಮ ಸ್ಪಿನ್ ಮ್ಯಾಜಿಕ್ ತೋರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದರು.

ಈ ಅಮೋಘ ಪ್ರದರ್ಶನಕ್ಕಾಗಿ ಸುಂದರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರೊಂದಿಗೆ 2017 ರಿಂದ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ವಾಷಿಂಗ್ಟನ್ ಸುಂದರ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದರು.

ಸುಂದರ್ ಇಲ್ಲಿಯವರೆಗೆ ಟೀಮ್ ಇಂಡಿಯಾ ಪರ 4 ಟೆಸ್ಟ್, 19 ಏಕದಿನ ಮತ್ತು 46 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು ಹಲವು ಸಂದರ್ಭಗಳಲ್ಲಿ ತಂಡದ ಗೆಲುವಿಗೆ ಗಣನೀಯ ಕೊಡುಗೆ ನೀಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಾಯಕ ಶುಭ್ಮಲ್ ಗಿಲ್ ಅವರ ಅರ್ಧಶತಕದ ಇನಿಂಗ್ಸ್‌ನ ಆಧಾರದ ಮೇಲೆ 20 ಓವರ್‌ಗಳಲ್ಲಿ 182 ರನ್ ಗಳಿಸಿತು. ಗಿಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರು. ಇದಕ್ಕೆ ಉತ್ತರವಾಗಿ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಲಷ್ಟೇ ಶಕ್ತವಾಯಿತು.
Published On - 4:14 pm, Thu, 11 July 24




