IND vs ZIM: 7 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಈ ಪ್ರಶಸ್ತಿ ಗೆದ್ದ ವಾಷಿಂಗ್ಟನ್ ಸುಂದರ್

|

Updated on: Jul 11, 2024 | 4:15 PM

IND vs ZIM: ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದರು. ಈ ಅಮೋಘ ಪ್ರದರ್ಶನಕ್ಕಾಗಿ ಸುಂದರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರೊಂದಿಗೆ 2017 ರಿಂದ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ವಾಷಿಂಗ್ಟನ್ ಸುಂದರ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದರು.

1 / 5
ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಸರಣಿಯ ಮೂರನೇ ಪಂದ್ಯವನ್ನು ಭಾರತ ತಂಡ 23 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯ ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಆಲ್ ರೌಂಡರ್‌ ವಾಷಿಂಗ್ಟನ್ ಸುಂದರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

2 / 5
ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ತಮ್ಮ ಸ್ಪಿನ್ ಮ್ಯಾಜಿಕ್ ತೋರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದರು.

3 / 5
ಈ ಅಮೋಘ ಪ್ರದರ್ಶನಕ್ಕಾಗಿ ಸುಂದರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರೊಂದಿಗೆ 2017 ರಿಂದ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ವಾಷಿಂಗ್ಟನ್ ಸುಂದರ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದರು.

4 / 5
ಸುಂದರ್ ಇಲ್ಲಿಯವರೆಗೆ ಟೀಮ್ ಇಂಡಿಯಾ ಪರ 4 ಟೆಸ್ಟ್, 19 ಏಕದಿನ ಮತ್ತು 46 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು ಹಲವು ಸಂದರ್ಭಗಳಲ್ಲಿ ತಂಡದ ಗೆಲುವಿಗೆ ಗಣನೀಯ ಕೊಡುಗೆ ನೀಡಿದ್ದಾರೆ.

5 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಾಯಕ ಶುಭ್​ಮಲ್ ಗಿಲ್ ಅವರ ಅರ್ಧಶತಕದ ಇನಿಂಗ್ಸ್‌ನ ಆಧಾರದ ಮೇಲೆ 20 ಓವರ್‌ಗಳಲ್ಲಿ 182 ರನ್ ಗಳಿಸಿತು. ಗಿಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರು. ಇದಕ್ಕೆ ಉತ್ತರವಾಗಿ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಲಷ್ಟೇ ಶಕ್ತವಾಯಿತು.

Published On - 4:14 pm, Thu, 11 July 24