AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shafali Verma: 4,4,4,4,4,6: ಸ್ಪೋಟಕ ಬ್ಯಾಟಿಂಗ್​ನಿಂದ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ ಆಟಗಾರ್ತಿ

IND-W U19 vs SA-W U19: ಈ ಜಯದೊಂದಿಗೆ ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ.

TV9 Web
| Edited By: |

Updated on: Jan 14, 2023 | 10:56 PM

Share
ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಶಫಾಲಿ ವರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಹೊಸ ದಾಖಲೆ ಬರೆದಿದ್ದಾರೆ. ಬೆನೊನಿಯಲ್ಲಿ ನಡೆದ 3ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ಭಾರತ ತಂಡ ಮುಖಾಮುಖಿಯಾಗಿತ್ತು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ಅಂಡರ್ 19 ಮಹಿಳಾ ತಂಡದ ನಾಯಕಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತರುಣಿಯರು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್​ ಕಲೆಹಾಕಿತು.

2 / 6
167 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾ ಪರ ಶಫಾಲಿ ವರ್ಮಾ ಹಾಗೂ ಶ್ವೇತಾ ಸೆಹ್ರಾವತ್ ಆರಂಭಿಕರಾಗಿ ಕಣಕ್ಕಿಳಿದರು. ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿ 7 ಓವರ್​ಗಳಲ್ಲಿ 77 ರನ್​ ಚಚ್ಚಿದ್ದರು.

3 / 6
ಅದರಲ್ಲೂ ನ್ತಾಬಿಸೆಂಗ್ ನೀನಿ ಎಸೆದ ಪಂದ್ಯದ 6ನೇ ಓವರ್​ನಲ್ಲಿ ಅಬ್ಬರಿಸಿದ ಮೊದಲ 5 ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ 5 ಫೋರ್​ಗಳನ್ನು ಬಾರಿಸಿದರು. ಇನ್ನು 6ನೇ ಎಸೆತದಲ್ಲಿ ಭರ್ಜರಿ ಸಿಕ್ಸ್​ ಸಿಡಿಸುವ ಮೂಲಕ ಒಟ್ಟು 26 ರನ್ ಕಲೆಹಾಕಿದರು. ಈ ಮೂಲಕ ಮಹಿಳಾ ಅಂಡರ್-19 ಪಂದ್ಯದಲ್ಲಿ ಒಂದೇ ಓವರ್​ನ ಎಲ್ಲಾ ಎಸೆತಗಳಲ್ಲಿ ಬೌಂಡರಿ ಬಾರಿಸಿದ ಮೊದಲ ಆಟಗಾರ್ತಿ ಎಂಬ ವಿಶ್ವ ದಾಖಲೆಯನ್ನು ಶಫಾಲಿ ವರ್ಮಾ ತಮ್ಮದಾಗಿಸಿಕೊಂಡರು.

4 / 6
ಇನ್ನು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಶಫಾಲಿ ಕೇವಲ  16 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 45 ರನ್​ಗಳಿಸಿ ಔಟಾದರು. ಇದರ ಬೆನ್ನಲ್ಲೇ ಅಬ್ಬರ ಶುರು ಮಾಡಿದ ಶ್ವೇತಾ ಶೆಹರಾವತ್ 57 ಎಸೆತಗಳಲ್ಲಿ 20 ಫೋರ್​ನೊಂದಿಗೆ ಅಜೇಯ 92 ರನ್​ ಚಚ್ಚಿದರು.

5 / 6
ಅದರಂತೆ ಟೀಮ್ ಇಂಡಿಯಾ ಅಂಡರ್-19 ಯುವತಿಯರು 16.3 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 170 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ.

6 / 6
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?