- TV9 Kannada Photo gallery Cricket photos Rohit Sharma to Break 37 Year Old ODI Record vs Afghanistan: Oldest Indian Player
IND vs AFG: ಏಕದಿನ ಪಂದ್ಯದಲ್ಲಿ ‘ಅತ್ಯಂತ ಹಿರಿಯ’ ದಾಖಲೆ ಬರೆಯಲಿದ್ದಾರೆ ರೋಹಿತ್ ಶರ್ಮಾ
Rohit Sharma: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕದಿನ ಸರಣಿ ಜೂನ್ 13 ರಂದು ಆರಂಭವಾಗಲಿದ್ದು, ರೋಹಿತ್ ಶರ್ಮಾ ಮೈದಾನಕ್ಕಿಳಿಯಲಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ರೋಹಿತ್, ಮೊಹಿಂದರ್ ಅಮರನಾಥ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದು, ಏಕದಿನ ಪಂದ್ಯವನ್ನಾಡಿದ ಅತ್ಯಂತ ಹಿರಿಯ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಐತಿಹಾಸಿಕ ಪಂದ್ಯಕ್ಕಾಗಿ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
Updated on: Jun 11, 2026 | 9:27 PM

ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಸರಣಿಯ ಮೊದಲ ಏಕದಿನ ಪಂದ್ಯ ಜೂನ್ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುವ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಪ್ರಮುಖ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ (PC- PTI).

ವಾಸ್ತವವಾಗಿ ಗಾಯದಿಂದ ಬಳಲುತ್ತಿದ್ದ ರೋಹಿತ್ ಶರ್ಮಾ ಈ ಏಕದಿನ ಸರಣಿಯಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ ಕಳೆದೆರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋಗಳನ್ನು ಗಮನಿಸಿದರೆ ರೋಹಿತ್ ಶರ್ಮಾ ಏಕದಿನ ಸರಣಿಗಾಗಿ ತಂಡವನ್ನು ಕೂಡಿಕೊಂಡಿರುವುದನ್ನು ನೋಡಬಹುದು (PC- PTI).

ಗಾಯದಿಂದ ಚೇತರಿಸಿಕೊಂಡು ಫಿಟ್ನೆಸ್ ಪರೀಕ್ಷೆಯಲ್ಲೂ ಪಾಸ್ ಆಗಿರುವ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯದಲ್ಲಿ ಆಡಿದರೆ ಭಾರತದ ಪರ ಏಕದಿನ ಪಂದ್ಯವನ್ನಾಡಿದ ಅತ್ಯಂತ ಹಿರಿಯ ಆಟಗಾರನೆಂಬ ದಾಖಲೆ ಬರೆಯಲಿದ್ದಾರೆ. ರೋಹಿತ್ ಶರ್ಮಾಗೆ ಪ್ರಸ್ತುತ ವಯಸ್ಸು 39 ವರ್ಷ 44 ದಿನಗಳಾಗಿದ್ದು, ಈ ವಯಸ್ಸಿನಲ್ಲಿ ಏಕದಿನ ಪಂದ್ಯ ಆಡಿದ ಅತ್ಯಂತ ಹಿರಿಯ ಭಾರತೀಯ ಆಟಗಾರನೆಂಬ ಹೆಗ್ಗಳಿಕೆ ಅವರದಾಗಲಿದೆ (PC- PTI).

ರೋಹಿತ್ ಶರ್ಮಾ ಅವರಿಗೂ ಮೊದಲು ಈ ದಾಖಲೆ ಮೊಹಿಂದರ್ ಅಮರನಾಥ್ ಅವರ ಹೆಸರಿನಲ್ಲಿತ್ತು. ಮೊಹಿಂದರ್ ಅಮರನಾಥ್ 39 ವರ್ಷ 36 ದಿನಗಳ ವಯಸ್ಸಿನಲ್ಲಿ ಏಕದಿನ ಪಂದ್ಯವನ್ನಾಡುವ ಮೂಲಕ ಭಾರತ ಪರ ಏಕದಿನ ಪಂದ್ಯವನ್ನಾಡಿದ ಅತ್ಯಂತ ಹಿರಿಯ ಆಟಗಾರನೆಂಬ ದಾಖಲೆಯನ್ನು ಹೊಂದಿದ್ದರು (PC- PTI).

ಇದೀಗ ಜೂನ್ 13 ರಂದು ರೋಹಿತ್ ಶರ್ಮಾ ಅಫ್ಘಾನಿಸ್ತಾನದ ವಿರುದ್ಧ ಅಖಾಡಕ್ಕಿಳಿಯುವ ಮೂಲಕ ಮೊಹಿಂದರ್ ಅಮರನಾಥ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಅವಕಾಶವನ್ನು ಹೊಂದಿದ್ದಾರೆ (PC- PTI).

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



