AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಟಿ20ಯಲ್ಲಿ ಇಶಾನ್ ಕಿಶನ್ ಆಡ್ತಾರಾ?; ಶ್ರೇಯಸ್ ಅಯ್ಯರ್ ಹೇಳಿದ್ದಿದು

ಭಾರತ-ಅಫ್ಘಾನಿಸ್ತಾನ ಟಿ20 ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಇಶಾನ್ ಕಿಶನ್‌ಗೆ ಗಾಯದ ಆತಂಕ ಎದುರಾಗಿತ್ತು. ಆದರೆ, ನಾಯಕ ಶ್ರೇಯಸ್ ಅಯ್ಯರ್, ಕಿಶನ್ ಗಂಭೀರವಾಗಿ ಗಾಯಗೊಂಡಿಲ್ಲ, ಕೇವಲ ಆಯಾಸದಿಂದ ವಿಶ್ರಾಂತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕಿಶನ್ ಮೊದಲ ಟಿ20 ಪಂದ್ಯಕ್ಕೆ ಸಂಪೂರ್ಣವಾಗಿ ಲಭ್ಯವಿರಲಿದ್ದಾರೆ. ಅವರ ಲಭ್ಯತೆ ತಂಡದ ಬ್ಯಾಟಿಂಗ್ ಬಲ ಹೆಚ್ಚಿಸಲಿದೆ.

ಪೃಥ್ವಿಶಂಕರ
|

Updated on:Sep 12, 2026 | 9:22 PM

Share
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 13 ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ರೂಪದಲ್ಲಿ ಆಘಾತ ಎದುರಾಗಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ನೆಟ್ ಅಭ್ಯಾಸದ ಸಮಯದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿತ್ತು(PC-PTI).

1 / 5
ಹೀಗಾಗಿ ಕಿಶನ್ ಮೊದಲ ಟಿ20 ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಕಿಶನ್ ಅಲಭ್ಯತೆ ತಂಡಕ್ಕೆ ದೊಡ್ಡ ಹೊಡೆತ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಏಕೆಂದರೆ ಕಿಶನ್ ಪ್ರಸ್ತುತ ಉತ್ತಮ ಫಾರ್ಮ್​ನಲ್ಲಿದ್ದು ದುಲೀಪ್ ಟ್ರೋಫಿಯಲ್ಲಿ ದಾಖಲೆಯ ಇನ್ನಿಂಗ್ಸ್ ಆಡಿ ತಂಡವನ್ನು ಚಾಂಪಿಯನ್ ಮಾಡಿದ್ದರು. ಹೀಗಾಗಿ ಕಿಶನ್ ಲಭ್ಯತೆ ತಂಡದ ಬ್ಯಾಟಿಂಗ್‌ ವಿಭಾಗವನ್ನು ಬಲಿಷ್ಠಗೊಳಿಸಲಿದೆ(PC-PTI).

2 / 5
ಇದೀಗ ಇಶಾನ್ ಕಿಶನ್ ಅವರ ಗಾಯಕ್ಕೆ ಸಂಬಂಧಿಸಿದಂತೆ ಮತ್ತು ಅವರು ಮೊದಲ ಪಂದ್ಯದಲ್ಲಿ ಆಡುವುದರ ಬಗ್ಗೆ ನಾಯಕ ಶ್ರೇಯಸ್ ಅಯ್ಯರ್ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ. ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೇಯಸ್ ಅಯ್ಯರ್, ‘ಇಶಾನ್ ಕಿಶನ್ ಅವರ ಗಾಯವು ಗಂಭೀರವಾಗಿಲ್ಲ, ಹೀಗಾಗಿ ಅವರು ಭಾನುವಾರದ ಪಂದ್ಯಕ್ಕೆ ಲಭ್ಯವಿರಲಿದ್ದಾರೆ ಎಂದಿದ್ದಾರೆ(PC-PTI).

3 / 5
ಇಶಾನ್ ಕಿಶನ್ ಪ್ರಸ್ತುತ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಅಭ್ಯಾಸದ ನಂತರ ನಾನು ಅವರೊಂದಿಗೆ ಮಾತನಾಡಿದೆ. ಕಿಶನ್ ನಿರಂತರವಾಗಿ ಕೆಂಪು ಚೆಂಡಿನ ಕ್ರಿಕೆಟ್ ಆಡುತ್ತಿರುವುದರಿಂದ ಸ್ವಲ್ಪ ದಣಿದಿದ್ದರು. ಅವರಿಗೆ ಇಂದು ವಿಶ್ರಾಂತಿ ನೀಡಲಾಗಿದ್ದು, ನಾಳೆಯ ಪಂದ್ಯಕ್ಕೆ ಸಂಪೂರ್ಣವಾಗಿ ಫಿಟ್ ಆಗುತ್ತಾರೆ ಎಂದು ನನಗೆ ವಿಶ್ವಾಸವಿದೆ ಎಂದು ಅಯ್ಯರ್ ಹೇಳಿದ್ದಾರೆ(PC-PTI).

4 / 5
ಕಿಶನ್ ಶನಿವಾರದ ಅಭ್ಯಾಸಕ್ಕೆ ಗೈರಾಗಿದ್ದು, ಯಾವುದೇ ಗಾಯದಿಂದಾಗಿ ಅಲ್ಲ, ಬದಲಾಗಿ ಕೆಲಸದ ಹೊರೆ ಮತ್ತು ಆಯಾಸದಿಂದಾಗಿ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮ ಎಂದು ಅಯ್ಯರ್ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ವಿಶ್ವದ ನಂ. 1 ಟಿ20 ಬ್ಯಾಟ್ಸ್‌ಮನ್ ಇಶಾನ್ ಕಿಶನ್ ತಂಡದಲ್ಲಿರುವುದು ಪ್ರಮುಖ ಪ್ಲಸ್ ಪಾಯಿಂಟ್ ಆಗಿದೆ. ಶ್ರೇಯಸ್ ಅಯ್ಯರ್ ಅವರ ಹೇಳಿಕೆಯ ನಂತರ, ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧ ಇಶಾನ್ ಮೈದಾನಕ್ಕಿಳಿಯುವುದು ಖಚಿತವಾಗಿದೆ(PC-PTI).

5 / 5

Published On - 9:16 pm, Sat, 12 September 26

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್

RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ