ಏಷ್ಯನ್ ಗೇಮ್ಸ್ಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಪ್ರಕಟ
Asian Games 2026: ಜಪಾನ್ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ (ಏಷ್ಯಾಡ್) ಕ್ರಿಕೆಟ್ ಪಂದ್ಯಾವಳಿಯು ಸೆಪ್ಟೆಂಬರ್ 17 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದೆ. ಈ ಟೂರ್ನಿಗಾಗಿ ಭಾರತ ಮತ್ತು ಪಾಕಿಸ್ತಾನ್ ಬಲಿಷ್ಠ ಆಟಗಾರರನ್ನು ಒಳಗೊಂಡ ತಂಡಗಳನ್ನು ಪ್ರಕಟಿಸಿದೆ.
Updated on: Aug 13, 2026 | 9:53 AM

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಟಿ20 ಕ್ರಿಕೆಟ್ ಟೂರ್ನಿಗಾಗಿ ಭಾರತ ಮತ್ತು ಪಾಕಿಸ್ತಾನ್ ತಂಡಗಳನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಿದರೆ, ಪಾಕಿಸ್ತಾನ್ ತಂಡದ ನಾಯಕನಾಗಿ ಸಾಹಿಬ್‌ಝಾದ ಫರ್ಹಾನ್ ಆಯ್ಕೆಯಾಗಿದ್ದಾರೆ. (PC: Getty Images)

ಈ ಹಿಂದೆ ಪಾಕಿಸ್ತಾನ್ ತಂಡದ ನಾಯಕನಾಗಿ ಸಲ್ಮಾನ್ ಅಲಿ ಅಘಾ ಕಣಕ್ಕಿಳಿಯುತ್ತಿದ್ದರು. ಆದರೆ ಇದೀಗ ಪಾಕಿಸ್ತಾನ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಅದರಂತೆ ಏಷ್ಯಾಡ್ ಟೂರ್ನಿಯಲ್ಲಿ ಸಾಹಿಬ್‌ಝಾದ ಫರ್ಹಾನ್ ಮುಂದಾಳತ್ವದಲ್ಲಿ ಪಾಕ್ ಪಡೆ ಕಣಕ್ಕಿಳಿಯಲಿವೆ. (PC: Getty Images)

ಇತ್ತ ಟೀಮ್ ಇಂಡಿಯಾದಲ್ಲಿ ಶ್ರೇಯಸ್ ಅಯ್ಯರ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡರೆ, ಉಪನಾಯಕನಾಗಿ ತಿಲಕ್ ವರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು ತಂಡದಲ್ಲಿ ಯುವ ದಾಂಡಿಗ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಅದರಂತೆ ಏಷ್ಯನ್ ಗೇಮ್ಸ್ನಲ್ಲಿ ಕಣಕ್ಕಿಳಿಯಲಿರುವ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈ ಕೆಳಗಿನಂತಿದೆ... (PC: Getty Images)

ಪಾಕಿಸ್ತಾನ್ ಟಿ20 ತಂಡ: ಸಾಹಿಬ್‌ಝಾದ ಫರ್ಹಾನ್ (ನಾಯಕ), ಅಬ್ದುಲ್ ಸಮದ್ (ಉಪನಾಯಕ), ಸೈಮ್ ಅಯೂಬ್, ಹೈದರ್ ಅಲಿ, ಹಸನ್ ನವಾಝ್, ಸಾದ್ ಮಸೂದ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಅರಾಫತ್ ಮಿನ್ಹಾಸ್, ಮಾಝ್ ಸದಾಕತ್, ಅಬ್ರಾರ್ ಅಹ್ಮದ್, ಸುಫ್ಯಾನ್ ಮುಖೀಮ್, ಅಹ್ಮದ್ ದಾನಿಯಾಲ್, ಆಕಿಫ್ ಜಾವೇದ್, ಅಲಿ ರಾಝ, ಮೊಹಮ್ಮದ್ ಸಲ್ಮಾನ್ ಮಿರ್ಝ. (PC: Getty Images)

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯಶ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವಿಪ್ರಾಜ್ ನಿಗಮ್, ವೈಭವ್ ಸೂರ್ಯವಂಶಿ. (PC: Getty Images)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



