IND vs SA 3rd T20: ಅಂತಿಮ ಕದನಕ್ಕೆ ಸಜ್ಜು: ಟೀಮ್ ಇಂಡಿಯಾ ಆಟಗಾರರಿಂದ ಭರ್ಜರಿ ಅಭ್ಯಾಸ
TV9 Web | Updated By: Vinay Bhat
Updated on:
Oct 04, 2022 | 10:56 AM
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ತಂಡ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಮೊದಲ ಕದನದಲ್ಲಿ 8 ವಿಕೆಟ್ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್ಗಳಿಂದ ಗೆದ್ದು ಬೀಗಿತ್ತು. ಇದೀಗ ಅಂತಿಮ ತೃತೀಯ ಸೆಣೆಸಾಟಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ.
1 / 8
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ತಂಡ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಮೊದಲ ಕದನದಲ್ಲಿ 8 ವಿಕೆಟ್ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್ಗಳಿಂದ ಗೆದ್ದು ಬೀಗಿತ್ತು. ಇದೀಗ ಅಂತಿಮ ತೃತೀಯ ಸೆಣೆಸಾಟಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ.
2 / 8
ಇಂದು ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಟಿ20 ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ (Team India) ಆಡುತ್ತಿರುವ ಕೊನೆಯ ಚುಟುಕು ಪಂದ್ಯ ಇದಾಗಿದ್ದು ಬೌಲಿಂಗ್ ವಿಭಾಗದಲ್ಲಿ ಪ್ರಯೋಗ ನಡೆಸುವುದು ಖಚಿತ.
3 / 8
ಮೂರನೇ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ವಿಶ್ರಾಂತಿ ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್ 6 ರಂದು ಟಿ20 ವಿಶ್ವಕಪ್‌ನ 15 ಸದಸ್ಯರ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಆದ್ದರಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಮೂರನೇ ಟಿ20 ಪಂದ್ಯದಲ್ಲಿ ಹಲವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.
4 / 8
ರಾಹುಲ್ ಮತ್ತು ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್ ಆಡುವ ಅವಕಾಶ ಪಡೆಯಬಹುದು ಎನ್ನಲಾಗಿದೆ.
5 / 8
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಿಷಬ್ ಪಂತ್ ಆಡುತ್ತಿದ್ದರೂ ಅವರಿಗೆ ಇದುವರೆಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಹೀಗಾಗಿ ರೋಹಿತ್ ಜೊತೆ ಇವರು ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
6 / 8
ಟೀಮ್ ಇಂಡಿಯಾ ದೊಡ್ಡ ತಲೆನೋವಾಗಿರುವುದು ಬೌಲಿಂಗ್ ವಿಭಾಗದಲ್ಲಿ. ಕಳೆದ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಕೊನೆಯ ನಾಲ್ಕು ಓವರ್‌ಗಳಲ್ಲಿ 65 ರನ್‌ಗಳನ್ನು ಬಿಟ್ಟುಕೊಟ್ಟರು. ಇದು ಕಳೆದ 5-6 ಪಂದ್ಯಗಳಲ್ಲಿ ಕಂಡುಬಂದಿದೆ.
7 / 8
ಜಸ್ಪ್ರಿತ್ ಬುಮ್ರಾ ಅಲಭ್ಯತೆ ಎದ್ದು ಕಾಣುತ್ತಿರುವುದು ನಿಜ. ಹೀಗಾಗಿ ಮೊಹಮ್ಮದ್ ಸಿರಾಜ್ ಮೇಲೆ ಒತ್ತಡವಿದೆ. ಅರ್ಶ್ದೀಪ್ ಸಿಂಗ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್ ವಿಕೆಟ್ ಕೀಳುವ ಜೊತೆಗೆ ಲಯ ಕಂಡುಕೊಳ್ಳಬೇಕಿದೆ.
8 / 8
ಭಾರತ: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ಉಪ ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಯುಜ್ವೇಂದ್ರ ಚಹಲ್, ಆರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
Published On - 10:56 am, Tue, 4 October 22