IND vs SA 2nd ODI: ಗೆಲುವು ಅನಿವಾರ್ಯ: ರಾಂಚಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ

Edited By:

Updated on: Oct 09, 2022 | 10:10 AM

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.

1 / 9

2 / 9

ಭಾರತ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಿಸಬೇಕಿದೆ. ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಬೇಕಾದ ಒತ್ತಡದಲ್ಲಿದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ.

3 / 9

ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಮಾತ್ರ ಕಳೆದ ಪಂದ್ಯದಲ್ಲಿ ತಂಡಕ್ಕೆ ನೆರವಾಗಿದ್ದರು.

4 / 9

ರುತುರಾಜ್ ಗಾಯಕ್ವಾಡ್ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ. ಹೀಗಾಗಿ ಇವರ ಜಾಗದಲ್ಲಿ ಇಂದು ರಜತ್ ಪಟಿದಾರ್ ಆಡಿದರೆ ಅಚ್ಚರಿ ಪಡಬೇಕಿಲ್ಲ. ಯಾಕೆಂದರೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

5 / 9

ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಸ್ಪಿನ್ ಅಷ್ಟೊಂದು ಕೆಲಸ ಮಾಡಿಲ್ಲ. ಬಿಷ್ಟೋಯಿ ಕೊಂಚ ದುಬಾರಿ ಕೂಡ ಆಗಿದ್ದರು. ಹೀಗಾಗಿ ಇವರ ಬದಲು ವಾಷಿಂಗ್ಟನ್ ಸುಂದರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

6 / 9

ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಆವೇಶ್ ಖಾನ್ ಲಯ ಕಂಡುಕೊಳ್ಳಬೇಕಿದೆ.

7 / 9

ಶನಿವಾರದಿಂದ ರಾಂಚಿಯಲ್ಲಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲ, ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಂಚಿಯ ಪ್ರಾದೇಶಿಕ ಹವಾಮಾನ ಇಲಾಖೆಯ ವಿಜ್ಞಾನಿ ಅಭಿಷೇಕ್ ಆನಂದ್ ಟಿವಿ9 ಹಿಂದಿಯೊಂದಿಗೆ ಮಾತನಾಡುತ್ತಾ, 9 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯವಿದ್ದು, ರಾಂಚಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

8 / 9

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

9 / 9

ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭ್ಮನ್ ಗಿಲ್, ರಜತ್ ಪಟಿದಾರ್, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆವೇಶ್ ಖಾನ್.

Published On - 10:10 am, Sun, 9 October 22

Loading...
Unable to load recommendations.
Follow Us