AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕಾಂಗೂರಗಳ ನಾಡಲ್ಲಿ ಜಹೀರ್- ಶಮಿ ದಾಖಲೆ ಮುರಿದ ಬುಮ್ರಾ

Bumrah's Record-Breaking Spell: ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಜಸ್ಪ್ರೀತ್ ಬುಮ್ರಾ ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪೈಕಿ ಇದೀಗ ಜಹೀರ್ ಖಾನ್ ಅವರನ್ನು ಹಿಂದಿಕ್ಕಿದ್ದಾರೆ. ಇನ್ನು ಎರಡು ಪಂದ್ಯಗಳಲ್ಲಿ ಬುಮ್ರಾ 23 ವಿಕೆಟ್ ಪಡೆದರೆ ಕಪಿಲ್ ದೇವ್ ಅವರ ದಾಖಲೆಯನ್ನೂ ಮುರಿಯಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Dec 07, 2024 | 4:16 PM

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಡಿಲೇಡ್‌ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 337 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 157 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಆಸೀಸ್ ಪರ ಟ್ರಾವಿಸ್ ಹೆಡ್ 140 ರನ್​ಗಳ ಇನ್ನಿಂಗ್ಸ್ ಆಡಿದರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ 4 ವಿಕೆಟ್ ಪಡೆದರು.

1 / 7
ಆಸ್ಟ್ರೇಲಿಯಾ ಪ್ರವಾಸದಲ್ಲಿ ಮಾರಕ ದಾಳಿ ನಡೆಸುತ್ತಿರುವ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಇನ್ನಿಂಗ್ಸ್​ನಲ್ಲಿ 4 ವಿಕೆಟ್ ಉರುಳಿಸುವ ಮೂಲಕ ಒಂದು ವರ್ಷದಲ್ಲಿ ಅಧಿಕ ಟೆಸ್ಟ್ ವಿಕೆಟ್ ಉರುಳಿಸಿದ ಭಾರತದ ಬೌಲರ್​ಗಳ ಪೈಕಿ ಇದೀಗ ಮಾಜಿ ವೇಗಿ ಜಹೀರ್ ಖಾನ್ ಅವರನ್ನು ಹಿಂದಿಕ್ಕಿದ್ದಾರೆ.

2 / 7
ಜಹೀರ್ ಖಾನ್ 2002 ರಲ್ಲಿ 51 ವಿಕೆಟ್ ಪಡೆಯುವ ಮೂಲಕ ಒಂದು ವರ್ಷದಲ್ಲಿ ಭಾರತದ ಪರ ಅತ್ಯಧಿಕ ಟೆಸ್ಟ್ ವಿಕೆಟ್ ಪಡೆದ ಮೂರನೇ ವೇಗದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಅವರ ಸ್ಥಾನವನ್ನು ಜಸ್ಪ್ರೀತ್ ಬುಮ್ರಾ ಆಕ್ರಮಿಸಿಕೊಂಡಿದ್ದಾರೆ. ಬುಮ್ರಾ ಇದುವರೆಗೆ 53 ವಿಕೆಟ್ ಉರುಳಿಸಿದ್ದಾರೆ.

3 / 7
ಬುಮ್ರಾ ಈ ವರ್ಷ ಇನ್ನು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಈ ವಿಷಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದಾರೆ. ಕಪಿಲ್ ದೇವ್ 1979 ಮತ್ತು 1983 ರಲ್ಲಿ ಕ್ರಮವಾಗಿ 74 ಹಾಗೂ 75 ವಿಕೆಟ್​ಗಳನ್ನು ಉರುಳಿಸಿ ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಆಕ್ರಮಿಸಿಕೊಂಡಿದ್ದಾರೆ.

4 / 7
ಇದೀಗ ಬುಮ್ರಾ ಈ ವರ್ಷ ಉಳಿದಿರುವ 5 ಇನ್ನಿಂಗ್ಸ್​ಗಳಲ್ಲಿ 23 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ, ಒಂದು ವರ್ಷದಲ್ಲಿ ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಳ್ಳಲಿದ್ದಾರೆ. ಇದಲ್ಲದೆ ಬುಮ್ರಾ, SENA ದೇಶಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಏಷ್ಯಾದ ಬೌಲರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ತಲುಪಿದ್ದಾರೆ.

5 / 7
ಅವರು ಸೆನಾ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ) ರಾಷ್ಟ್ರಗಳಲ್ಲಿ ಆಡಿರುವ 53 ಇನ್ನಿಂಗ್ಸ್‌ಗಳಲ್ಲಿ 125 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಬುಮ್ರಾ, ಸೆನಾ ರಾಷ್ಟ್ರಗಳಲ್ಲಿ 125  ವಿಕೆಟ್ ಕಬಳಿಸಿದ್ದ ಭಾರತದ ವೇಗದ ಬೌಲರ್ ಶಮಿ ಅವರನ್ನು ಹಿಂದಿಕ್ಕಿದ್ದಾರೆ.

6 / 7
130 ವಿಕೆಟ್ ಪಡೆದಿರುವ ಇಶಾಂತ್ ಶರ್ಮಾ ಬುಮ್ರಾಗಿಂತ ಮುಂದಿದ್ದಾರೆ. ಭಾರತದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ (141) ಎರಡನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನದ ಮಾಜಿ ವೇಗಿ ವಾಸಿಂ ಅಕ್ರಮ್ (146) ಅಗ್ರಸ್ಥಾನದಲ್ಲಿದ್ದಾರೆ.

7 / 7
Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ