AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್-19 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

India U19 vs Afghanistan U19: ಅಂಡರ್-19 ವಿಶ್ವಕಪ್​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 310 ರನ್ ಕಲೆಹಾಕಿದರೆ, ಈ ಗುರಿಯನ್ನು ಭಾರತ ತಂಡ 41.1 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on:Feb 05, 2026 | 8:25 AM

Share
ಅಂಡರ್-19 ವಿಶ್ವಕಪ್​ನ 16ನೇ ಆವೃತ್ತಿಯಲ್ಲೂ ಭಾರತ ತಂಡ ಫೈನಲ್​​ಗೇರಿದೆ. ಹರಾರೆಯಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಈ ಎಂಟ್ರಿಯೊಂದಿಗೆ ವಿಶೇಷ ವಿಶ್ವ ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದೆ.

1 / 5
ಅಂದರೆ ಭಾರತ ತಂಡವು ಅಂಡರ್-19 ವಿಶ್ವಕಪ್​ನಲ್ಲಿ ಫೈನಲ್​ಗೆ ಏರುತ್ತಿರುವುದು ಇದು 10ನೇ ಬಾರಿ. ಈ ಮೂಲಕ ಕಿರಿಯರ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ ಫೈನಲ್​ಗೇರಿದ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನ ಹೆಸರಿಗೆ ಸೇರ್ಪಡೆಗೊಳಿಸಿದೆ. 

2 / 5
ಅದರಲ್ಲೂ ಸತತ 6ನೇ ಬಾರಿಗೆ ಫೈನಲ್​ಗೆ ಪ್ರವೇಶಿಸಿದೆ. ಅಂದರೆ ಕಳೆದ 5 ಆವೃತ್ತಿಗಳಲ್ಲೂ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಇದೀಗ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಈ ಮೂಲಕ ಆರನೇ ಬಾರಿ ಅಂಡರ್-19 ವಿಶ್ವಕಪ್ ಗೆಲ್ಲುವ ಇರಾದೆಯಲ್ಲಿದೆ.

3 / 5
ಟೀಮ್ ಇಂಡಿಯಾ ಮೊದಲ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದಿದ್ದು 2000 ರಲ್ಲಿ. ಅಂದು ಮೊಹಮ್ಮದ್ ಕೈಫ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಅಂಡರ್-19 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ 2008 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2ನೇ ಬಾರಿ ವಿಶ್ವಕಪ್ ಎತ್ತಿ ಹಿಡಿದಿದ್ದರು.

4 / 5
ಆ ಬಳಿಕ 2012, 2018 ಮತ್ತು 2022 ರಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು. ಇದರ ನಡುವೆ 2006, 2016, 2020 ಮತ್ತು 2024 ರಲ್ಲಿ ಫೈನಲ್​ನಲ್ಲಿ ಸೋಲನುಭವಿಸಿತ್ತು. ಇದೀಗ 10ನೇ ಬಾರಿ ಫೈನಲ್​ಗೆ ಎಂಟ್ರಿ ಕೊಟ್ಟಿರುವ ಭಾರತ ತಂಡವು ಈ ಬಾರಿ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗುವ ನಿರೀಕ್ಷೆಯಿದೆ.

5 / 5

Published On - 8:24 am, Thu, 5 February 26

ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ

ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ?

ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ

ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ