ಸ್ಪೋಟಕ ಶತಕ… ಟೆಸ್ಟ್​ ಕ್ರಿಕೆಟ್​ ಸ್ವರೂಪವನ್ನೇ ಬುಡಮೇಲು ಮಾಡಿದ ಟೀಮ್ ಇಂಡಿಯಾ

India vs Bangladesh 2nd Test: ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್​ನಲ್ಲಿ ಪ್ರಥಮ ಇನಿಂಗ್ಸ್​ ಆಡುತ್ತಿರುವ ಟೀಮ್ ಇಂಡಿಯಾ ಚಹಾ ವಿರಾಮದ ವೇಳೆಗೆ 16 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 138 ರನ್​ ಕಲೆಹಾಕಿದೆ. ಈ ನೂರ ಮೂವತ್ತೆಂಟು ರನ್​ಗಳಲ್ಲಿ 100 ರನ್ ಮೂಡಿ ಬಂದಿರುವುದು ಕೇವಲ 10.1 ಓವರ್​ಗಳಲ್ಲಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Sep 30, 2024 | 2:53 PM

ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಅತೀ ಕಡಿಮೆ ಓವರ್​ಗಳಲ್ಲಿ ಅರ್ಧಶತಕ ಹಾಗೂ ಶತಕಗಳನ್ನು ಪೂರೈಸುವ ಮೂಲಕ ಎಂಬುದು ವಿಶೇಷ. ಅಂದರೆ 147 ವರ್ಷಗಳ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ರನ್ ಕಲೆಹಾಕಿದ ವಿಶ್ವ ದಾಖಲೆ ಇದೀಗ ಟೀಮ್ ಇಂಡಿಯಾ ಪಾಲಾಗಿದೆ.

1 / 5
ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕೇವಲ ಮೂರು ಓವರ್​ಗಳಲ್ಲಿ 50 ರನ್ ಕಲೆಹಾಕಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ್ದ ಇಂಗ್ಲೆಂಡ್ (4.2 ಓವರ್) ತಂಡದ ದಾಖಲೆಯನ್ನು ಮುರಿದರು.

2 / 5
ಅರ್ಧಶತಕದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (23) ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೂಡಿದ ಗಿಲ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 10.1 ಓವರ್​ಗಳಲ್ಲಿ 100 ರನ್ ಕಲೆಹಾಕಿ, ಟೆಸ್ಟ್​ನಲ್ಲಿ ಅತೀ ವೇಗವಾಗಿ ನೂರು ರನ್ ಪೂರೈಸಿದ ಹೊಸ ವಿಶ್ವ ದಾಖಲೆ ಬರೆಯಿತು.

3 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಭಾರತ ತಂಡದ ಹೆಸರಿನಲ್ಲಿಯೇ ಇತ್ತು ಎಂಬುದು ವಿಶೇಷ. 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ 12.2 ಓವರ್​ಗಳಲ್ಲಿ ಶತಕ ಪೂರೈಸಿದ್ದರು. ಇದೀಗ ತನ್ನದೇ ದಾಖಲೆಯನ್ನು ಮುರಿದು 10.1 ಓವರ್​ಗಳಲ್ಲಿ ಭಾರತ ತಂಡವು ಹೊಸ ಇತಿಹಾಸ ನಿರ್ಮಿಸಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ (72) ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಭಾರತದ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ 4ನೇ ಬ್ಯಾಟರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ 28 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ರಿಷಭ್ ಪಂತ್ ಅಗ್ರಸ್ಥಾನದಲ್ಲಿದ್ದಾರೆ.

5 / 5
Follow us