T20 World Cup 2024: ಟಿ20 ವಿಶ್ವಕಪ್ ತಂಡದ ಬದಲಾವಣೆಗೆ ಇನ್ನೂ ಇದೆ ಅವಕಾಶ..!
TV9 Web | Updated By: ಝಾಹಿರ್ ಯೂಸುಫ್
Updated on:
May 01, 2024 | 1:31 PM
T20 World Cup Squad 2024: ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾದ 15 ಸದಸ್ಯರ ತಂಡದಲ್ಲಿ ರಿಂಕು ಸಿಂಗ್, ಶುಭ್ಮನ್ ಗಿಲ್ ಹಾಗೂ ಕೆಎಲ್ ರಾಹುಲ್ಗೆ ಚಾನ್ಸ್ ಸಿಕ್ಕಿಲ್ಲ. ಹಾಗೆಯೇ ಭರ್ಜರಿ ಫಾರ್ಮ್ನಲ್ಲಿರುವ ಆರ್ಸಿಬಿ ದಾಂಡಿಗ ದಿನೇಶ್ ಕಾರ್ತಿಕ್ ಅವರನ್ನು ಸಹ ಆಯ್ಕೆಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಈ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲು ಮೇ 25 ರವರೆಗೆ ಅವಕಾಶವಿದೆ.
1 / 6
T20 World Cup 2024: ಟಿ20 ವಿಶ್ವಕಪ್ಗಾಗಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಇದುವೇ ಫೈನಲ್ ತಂಡ ಎಂದೇಳಲು ಬರುವುದಿಲ್ಲ. ಏಕೆಂದರೆ ಮೇ 25 ರವರೆಗೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
2 / 6
ಅಂದರೆ ಟಿ20 ವಿಶ್ವಕಪ್ ಆರಂಭಕ್ಕೂ ಒಂದು ವಾರ ಮುಂಚಿತವಾಗಿ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಇದಾದ ಬಳಿಕ ಗಾಯದ ಸಮಸ್ಯೆ ಅಥವಾ ಇನ್ನಿತರ ಕಾರಣಗಳಿಗಾಗಿ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾಗುತ್ತದೆ. ಆದರೆ ಈ ರೀತಿಯ ಬದಲಾವಣೆಗೂ ಮುನ್ನ ಐಸಿಸಿಯ ಟೆಕ್ನಿಕಲ್ ಕಮಿಟಿಯ ಅನುಮತಿ ಪಡೆಯಬೇಕು.
3 / 6
ಇದೇ ಕಾರಣದಿಂದಾಗಿ ಬಿಸಿಸಿಐ ಆಯ್ಕೆ ಸಮಿತಿ ನಾಲ್ವರು ಮೀಸಲು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಅಂದರೆ ಇಲ್ಲಿ ಯಾವುದಾದರೂ ಆಟಗಾರರು ಐಪಿಎಲ್ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದರೆ ಅವರನ್ನು ತಂಡದಿಂದ ಕೈ ಬಿಡುವುದು ಖಚಿತ. ಏಕೆಂದರೆ ಈ ಹಿಂದೆ ಕೂಡ ಟೀಮ್ ಇಂಡಿಯಾ ಇಂತಹದೊಂದು ಬದಲಾವಣೆ ಮಾಡಿಕೊಂಡಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.
4 / 6
2021 ರ ಟಿ20 ವಿಶ್ವಕಪ್ ತಂಡಕ್ಕೆ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದರು. ಆದರೆ ಟಿ20 ವಿಶ್ವಕಪ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಮೀಸಲು ಆಟಗಾರರ ಪಟ್ಟಿಯಲ್ಲಿದ್ದ ಶಾರ್ದೂಲ್ ಠಾಕೂರ್ಗೆ ಚಾನ್ಸ್ ನೀಡಲಾಗಿತ್ತು. ಅಲ್ಲದೆ ಅಕ್ಷರ್ ಪಟೇಲ್ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿತ್ತು.
5 / 6
ಹೀಗಾಗಿ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ. ಅದರಂತೆ ಈ ಬಾರಿ ಕೊನೆ ಕ್ಷಣದಲ್ಲಿ ಯಾರಿಗೆ ಚಾನ್ಸ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
6 / 6
ಟಿ20 ವಿಶ್ವಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ. ||| ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.