AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿಂದ ಜಯಭೇರಿ ಬಾರಿಸಿದೆ. ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾ ತವರಿನಲ್ಲಿ 'ಶತಕ' ಪೂರೈಸಿದೆ.

ಝಾಹಿರ್ ಯೂಸುಫ್
|

Updated on: Jan 24, 2026 | 9:54 AM

Share
ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು.

2 / 5
ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ತವರಿನಲ್ಲಿ 100 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ನ್ಯೂಝಿಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳ ಹೆಸರಿನಲ್ಲಿ ಮಾತ್ರ ಇತ್ತು. ನ್ಯೂಝಿಲೆಂಡ್ ತಂಡವು ತವರಿನಲ್ಲಿ ಒಟ್ಟು 113 ಟಿ20 ಪಂದ್ಯಗಳನ್ನಾಡಿದೆ. ಹಾಗೆಯೇ ವೆಸ್ಟ್ ಇಂಡೀಸ್ ತವರಿನಲ್ಲಿ 108 ಪಂದ್ಯಗಳನ್ನಾಡಿದ ದಾಖಲೆ ಹೊಂದಿದೆ.

3 / 5
ಇದೀಗ ಭಾರತ ತಂಡವು ಈ ಪಟ್ಟಿಗೆ ಸೇರ್ಪಡೆಯಾಗಿದೆ. ಟೀಮ್ ಇಂಡಿಯಾ ಈವರೆಗೆ 265 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದೆ. ಇದರಲ್ಲಿ ಭಾರತದಲ್ಲಿ ಆಡಿದ ಪಂದ್ಯಗಳ ಸಂಖ್ಯೆ 100. ಈ ಮೂಲಕ ತವರು ಮೈದಾನದಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಪಟ್ಟಿಗೆ ಟೀಮ್ ಇಂಡಿಯಾ ಸೇರ್ಪಡೆಯಾಗಿದೆ.

4 / 5
ಇನ್ನು ಭಾರತ ತಂಡವು ಈವರೆಗೆ ಆಡಿದ 265 ಟಿ20 ಪಂದ್ಯಗಳಲ್ಲಿ 183 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಸೋತಿರುವುದು ಕೇವಲ 73 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ ಪಂದ್ಯಗಳಲ್ಲಿ 7 ಮ್ಯಾಚ್​ಗಳು ಟೈ ಆಗಿದೆ. ಹಾಗೆಯೇ 6 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದ್ದವು. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡವೆಂಬ ವಿಶ್ವ ದಾಖಲೆ ಕೂಡ ಟೀಮ್ ಇಂಡಿಯಾ ಹೆಸರಿನಲ್ಲಿದೆ.

5 / 5
Follow Us
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ

ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?

ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ

ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು

ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ

ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು

ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು

‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?

ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ

SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ