AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4ನೇ ಟಿ20 ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದಿಂದ ಇಬ್ಬರು ಆಟಗಾರರು ಔಟ್

India vs England 4th T20: ಭಾರತ ಮತ್ತು ಇಂಗ್ಲೆಂಡ್ ನಡುವಿನ 4ನೇ ಟಿ20 ಪಂದ್ಯ ಜುಲೈ 9 ರಂದು ಬ್ರಿಸ್ಟಲ್‌ನಲ್ಲಿ ನಡೆಯಲಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಇಂಗ್ಲೆಂಡ್, ಸರಣಿ ಗೆಲ್ಲುವ ತವಕದಲ್ಲಿದೆ. ಆದರೆ, ಆಡುವ ಅವಕಾಶ ಸಿಗದ ಜೇಮ್ಸ್ ಕೋಲ್ಸ್ ಮತ್ತು ರೆಹಾನ್ ಅಹ್ಮದ್ ಅವರನ್ನು ಇಂಗ್ಲೆಂಡ್ ತಂಡದಿಂದ ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ. ಬ್ರಿಸ್ಟಲ್‌ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಇದುವರೆಗೆ ಗೆದ್ದಿಲ್ಲ ಎಂಬುದು ಗಮನಾರ್ಹ.

ಪೃಥ್ವಿಶಂಕರ
|

Updated on: Jul 08, 2026 | 9:57 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ 4ನೇ ಟಿ20 ಪಂದ್ಯ ಜುಲೈ 9 ರಂದು ಬ್ರಿಸ್ಟಲ್‌ನ ಕೌಂಟಿ ಮೈದಾನದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಈಗಾಗಲೇ 2-0 ಅಂತರ ಸಾಧಿಸಿರುವ ಆತಿಥೇಯ ಇಂಗ್ಲೆಂಡ್ ತಂಡ ಇದೀಗ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತನ್ನ ತಂಡದಿಂದ ಇಬ್ಬರು ಆಟಗಾರರನ್ನು ಇಂಗ್ಲೆಂಡ್ ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ.

1 / 5
ಇಂಗ್ಲೆಂಡ್ ತಂಡದಲ್ಲಿರುವ ಆಲ್‌ರೌಂಡರ್‌ಗಳಾದ ಜೇಮ್ಸ್ ಕೋಲ್ಸ್ ಮತ್ತು ರೆಹಾನ್ ಅಹ್ಮದ್ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ. ವಾಸ್ತವವಾಗಿ ಈ ಇಬ್ಬರಿಗೆ ಇದುವರೆಗೆ ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಹೀಗಾಗಿ ಇವರಿಬ್ಬರು ಬೆಂಚ್ ಕಾಯುವ ಬದಲು ಟಿ20 ಬ್ಲಾಸ್ಟ್‌ನಲ್ಲಿ ಆಡಲು ಅನುಮತಿ ನೀಡಲಾಗಿದೆ.

2 / 5
ಿಇದೀಗ ಇಂಗ್ಲೆಂಡ್ ಟಿ20 ತಂಡದಿಂದ ಹೊರಬಿದ್ದಿರುವ ಇವರಿಬ್ಬರು ಟಿ20 ಬ್ಲಾಸ್ಟ್‌ನಲ್ಲಿ ಕಣಕ್ಕಿಳಿಯಲಿದ್ದಾರೆ. ಓವಲ್‌ನಲ್ಲಿ ನಡೆಯಲಿರುವ ಟಿ20 ಬ್ಲಾಸ್ಟ್‌ನಲ್ಲಿ ಜೇಮ್ಸ್ ಕೋಲ್ಸ್ ಸಸೆಕ್ಸ್ ತಂಡದ ಪರ ಹಾಗೂ ಸರ್ರೆ ವಿರುದ್ಧ ಆಡಿದರೆ. ರೆಹಾನ್ ಅಹ್ಮದ್ ಡರ್ಹ್ಯಾಮ್ ವಿರುದ್ಧ ಲೀಸೆಸ್ಟರ್‌ಶೈರ್ ಪರ ಆಡಲಿದ್ದಾರೆ.

3 / 5
ಇನ್ನು 4ನೇ ಟಿ20 ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ಮೂರನೇ ಟಿ20 ಪಂದ್ಯದಲ್ಲಿ ಆಡಿದ ಹನ್ನೊಂದು ಆಟಗಾರರೇ ಈ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ಮ್ಯಾಂಚೆಸ್ಟರ್ ಮತ್ತು ನಾಟಿಂಗ್‌ಹ್ಯಾಮ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಈಗ, ಬ್ರಿಸ್ಟಲ್‌ನಲ್ಲಿ ಗೆಲುವಿನೊಂದಿಗೆ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ಪ್ರಯತ್ನಿಸಲಿದೆ.

4 / 5
ಬ್ರಿಸ್ಟಲ್​ನಲ್ಲಿ ಇಂಗ್ಲೆಂಡ್ ತಂಡದ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಇಂಗ್ಲೆಂಡ್ ಈ ಮೈದಾನದಲ್ಲಿ ಭಾರತದ ವಿರುದ್ಧ ಇದುವರೆಗೆ ಒಂದು ಪಂದ್ಯವನ್ನು ಗೆದ್ದಿಲ್ಲ. ಎರಡೂ ತಂಡಗಳು ಒಂದು ಏಕದಿನ ಮತ್ತು ಒಂದು ಟಿ20ಪಂದ್ಯವನ್ನು ಆಡಿದ್ದು, ಭಾರತ ಎರಡರಲ್ಲೂ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಎರಡೂ ತಂಡಗಳ ನಡುವಿನ ಕೊನೆಯ ಪಂದ್ಯ 2018 ರಲ್ಲಿ ನಡೆದಿತ್ತು. ಆ ಪಂದ್ಯವನ್ನು ಭಾರತ ಗೆದ್ದಿತ್ತು.

5 / 5
Follow Us
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್

ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?

ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ

ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ

2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ

ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ

ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ

ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ

ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ