
ಟಿ20 ವಿಶ್ವಕಪ್ಗಾಗಿ ಮೂರು ತಂಡಗಳನ್ನು ಪ್ರಕಟಿಸಲಾಗಿದೆ. ಈ ಮೊದಲು ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡವನ್ನು ಪ್ರಕಟಿಸಲಾಗಿತ್ತು. ಇದರ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಟಿ20 ವಿಶ್ವಕಪ್ಗಾಗಿ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಇದೀಗ ಒಮಾನ್ ಕೂಡ ಟಿ20 ವಿಶ್ವಕಪ್ ತಂಡವನ್ನು ಹೆಸರಿಸಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿರುವ 3 ತಂಡಗಳು ಕೆಳಗಿನಂತಿದೆ...

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮಿ ಓವರ್ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.

ಒಮಾನ್ ಟಿ20 ತಂಡ: ಜತೀಂದರ್ ಸಿಂಗ್ (ನಾಯಕ), ವಿನಾಯಕ್ ಶುಕ್ಲಾ, ಮೊಹಮ್ಮದ್ ನದೀಮ್, ಶಕೀಲ್ ಅಹ್ಮದ್, ಹಮ್ಮದ್ ಮಿರ್ಝ, ವಾಸಿಂ ಅಲಿ, ಕರಣ್ ಸೋನಾವಾಲೆ, ಶಾ ಫೈಸಲ್, ನದೀಮ್ ಖಾನ್, ಸುಫ್ಯಾನ್ ಮೆಹಮೂದ್, ಜೇ ಒಡೆದರ, ಶಫೀಕ್ ಜಾನ್, ಆಶಿಶ್ ಒಡೆದರ, ಜಿತೇನ್ ರಾಮನಂದಿ, ಹಸ್ನೈನ್ ಅಲಿ ಶಾ.

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 4 ಗ್ರೂಪ್ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಎಲ್ಲಾ ತಂಡಗಳು 4 ಪಂದ್ಯಗಳನ್ನಾಡಲಿದೆ.