AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಏಕದಿನ ಸರಣಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯಲಿರುವ ರೋಹಿತ್

Rohit Sharma's Record Hunt: ಭಾರತ-ಇಂಗ್ಲೆಂಡ್ ಏಕದಿನ ಸರಣಿ ಜುಲೈ 14 ರಿಂದ ಆರಂಭ. ಈ ಸರಣಿಯಲ್ಲಿ ರೋಹಿತ್ ಶರ್ಮಾ ಹಲವು ಹೊಸ ದಾಖಲೆಗಳನ್ನು ಬರೆಯುವ ಸನಿಹದಲ್ಲಿದ್ದಾರೆ. ಶತಕ ಬಾರಿಸಿದರೆ ಭಾರತೀಯ ಆರಂಭಿಕನಾಗಿ ಅತಿ ಹೆಚ್ಚು ಶತಕ, ಇಂಗ್ಲೆಂಡ್‌ನಲ್ಲಿ 10 ಶತಕಗಳು ಸೇರಿ ಹಲವು ಮೈಲಿಗಲ್ಲುಗಳನ್ನು ತಲುಪಲಿದ್ದಾರೆ. 12,000 ಏಕದಿನ ರನ್‌ಗಳೂ ಅವರ ಗುರಿಯಾಗಿವೆ.

ಪೃಥ್ವಿಶಂಕರ
|

Updated on: Jul 12, 2026 | 10:00 PM

Share
Rohit

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜುಲೈ 14 ರಿಂದ ಅಂದರೆ ಬರುವ ಮಂಗಳವಾರದಿಂದ ಆರಂಭವಾಗಲಿದೆ. ಈ ಸರಣಿಯ ಮೂಲಕ ಟೀಂ ಇಂಡಿಯಾದ ಇಬ್ಬರು ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶರ್ಮಾ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ಆಡಿದ್ದರಾದರೂ, ಗಾಯದಿಂದಾಗಿ ಕೊಹ್ಲಿ ಈ ಸರಣಿಯ ಭಾಗವಾಗಿರಲಿಲ್ಲ (PC-PTI).

1 / 6
ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಫಾರ್ಮ್​ ಕಂಡುಕೊಂಡಿದ್ದರು. ಇದೀಗ ರೋಹಿತ್ ಇಂಗ್ಲೆಂಡ್‌ ವಿರುದ್ಧವೂ ಅದೇ ಫಾರ್ಮ್​ ಮುಂದುವರೆದರೆ, ಹಲವಾರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲೂ ರೋಹಿತ್ ಶತಕ ಬಾರಿಸಿದರೆ, ಒಟ್ಟಿಗೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ (PC-PTI).

2 / 6
 ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶತಕ ಬಾರಿಸಿದರೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲಿ ಮೊದಲನೆಯದಾಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯ ಆರಂಭಿಕ ಆಟಗಾರನೆಂಬ ದಾಖಲೆ ರೋಹಿತ್ ಪಾಲಾಗಲಿದೆ. ಎರಡನೆಯದಾಗಿ 39 ನೇ ವಯಸ್ಸಿನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ (PC-PTI).

3 / 6
ಮೂರನೆಯದಾಗಿ, ಡಾನ್ ಬ್ರಾಡ್ಮನ್ ನಂತರ ಇಂಗ್ಲೆಂಡ್‌ನಲ್ಲಿ 10 ಶತಕಗಳನ್ನು ಸಿಡಿಸಿದ ಎರಡನೇ ವಿದೇಶಿ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರೋಹಿತ್ ಪಾತ್ರರಾಗಲಿದ್ದಾರೆ. ಇದರ ಜೊತೆಗೆ ಮೂರು ಪಂದ್ಯಗಳ ಈ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಎರಡು ಶತಕಗಳನ್ನು ಸಿಡಿಸಿದರೆ, ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಅಂತರರಾಷ್ಟ್ರೀಯ ಶತಕಗಳನ್ನು ಬಾರಿಸಿದ ಭಾರತೀಯ ಆಟಗಾರನಾಗಲಿದ್ದಾರೆ (PC-PTI).

4 / 6
ಇದರ ಜೊತೆಗೆ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆರಂಭಿಕ ಆಟಗಾರ ಮತ್ತು ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗುವ ಅವಕಾಶವನ್ನು ಹೊಂದಿದ್ದಾರೆ. ಈ ದಾಖಲೆಗಳನ್ನು ಸೃಷ್ಟಿಸಲು ರೋಹಿತ್, ಈ ಸರಣಿಯಲ್ಲಿ ಒಂದು ಸಿಕ್ಸರ್ ಜೊತೆಗೆ 178 ರನ್​ಗಳನ್ನು ಕಲೆಹಾಕಬೇಕಿದೆ (PC-PTI).

5 / 6
ಹಾಗೆಯೇ ರೋಹಿತ್ ಶರ್ಮಾ ಈ ಏಕದಿನ ಸರಣಿಯಲ್ಲಿ ಎಂಟು ಸಿಕ್ಸರ್‌ಗಳನ್ನು ಬಾರಿಸಿದರೆ, ಇಂಗ್ಲೆಂಡ್‌ನಲ್ಲಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿದೇಶಿ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ರೋಹಿತ್ ಏಕದಿನ ಕ್ರಿಕೆಟ್​ನಲ್ಲಿ 12,000 ಏಕದಿನ ರನ್‌ಗಳನ್ನು ತಲುಪಲು 280 ರನ್‌ಗಳ ದೂರದಲ್ಲಿದ್ದಾರೆ (PC-PTI).

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ

ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ