Updated on: Nov 09, 2024 | 8:03 AM
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 202 ರನ್ಗಳನ್ನು ಕಲೆಹಾಕಿ, 61 ರನ್ಗಳ ಜಯ ಸಾಧಿಸಿದೆ. ಈ ಗೆಲುವಿನ ಜೊತೆಗೆ ಭಾರತ ತಂಡವು ವಿಶೇಷ ವಿಶ್ವ ದಾಖಲೆಯನ್ನು ಸಹ ತನ್ನದಾಗಿಸಿಕೊಂಡಿದೆ. ಅದು ಸಹ ಜಪಾನ್ ತಂಡದ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ..!
ಹೌದು, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ 200 ಪ್ಲಸ್ ಸ್ಕೋರ್ಗಳಿಸಿದ ವಿಶ್ವ ದಾಖಲೆಯೊಂದು ಜಪಾನ್ ತಂಡದ ಹೆಸರಿನಲ್ಲಿದೆ. 2024 ರಲ್ಲಿ ಜಪಾನ್ ತಂಡವು ಒಟ್ಟು 7 ಬಾರಿ 200+ ಸ್ಕೋರ್ಗಳಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದೆ. ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಭಾರತೀಯರು ಯಶಸ್ವಿಯಾಗಿದ್ದಾರೆ.
2024 ರಲ್ಲಿ ಟೀಮ್ ಇಂಡಿಯಾ ಒಟ್ಟು 7 ಬಾರಿ 200+ ಸ್ಕೋರ್ ಗಳಿಸಿದೆ. ಈ ಮೂಲಕ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್ಗಳಿಸಿದ ತಂಡಗಳ ಪಟ್ಟಿಯಲ್ಲಿ ಜಪಾನ್ ಜೊತೆ ಜಂಟಿಯಾಗಿ ಮೊದಲ ಸ್ಥಾನ ಅಲಂಕರಿಸಿದೆ.
ಇನ್ನು ಸೌತ್ ಆಫ್ರಿಕಾ ವಿರುದ್ಧದ ಉಳಿದ 4 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯಾದರೂ 200+ ಸ್ಕೋರ್ಗಳಿಸಿದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಹೀಗಾಗಿ ನವೆಂಬರ್ 10, 13, 15 ರಂದು ನಡೆಯಲಿರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾದಿಂದ ಭರ್ಜರಿ ದಾಖಲೆ ನಿರೀಕ್ಷಿಸಬಹುದು.
ಅಂದಹಾಗೆ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 61 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡು 202 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು 17.5 ಓವರ್ಗಳಲ್ಲಿ 141 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ನಾಲ್ಕು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.