- Kannada News Photo gallery Cricket photos India Equals South Africa's Most consecutive Test series wins Record
ಸತತ ಗೆಲುವುಗಳೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 140 ರನ್ಗಳ ಅಮೋಘ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ವೆಸ್ಟ್ ಇಂಡೀಸ್ ಪಡೆಯನ್ನು 7 ವಿಕೆಟ್ಗಳಿಂದ ಸೋಲಿಸುವಲ್ಲಿ ಭಾರತೀಯರು ಯಶಸ್ವಿಯಾಗಿದ್ದಾರೆ.
Updated on: Oct 14, 2025 | 10:57 AM

ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಸತತ ಸರಣಿ ಗೆಲುವುಗಳೊಂದಿಗೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವರ್ಲ್ಡ್ ರೆಕಾರ್ಡ್ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನಕ್ಕೇರಿದೆ.

ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಸತತ 10 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ. 2002 ರಿಂದ ಶುರುವಾದ ಈ ಟೆಸ್ಟ್ ಸರಣಿ ಗೆಲುವಿನ ನಾಗಾಲೋಟದೊಂದಿಗೆ ಭಾರತ ತಂಡವು ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ.

ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಟೆಸ್ಟ್ ಸರಣಿ ಗೆದ್ದ ದಾಖಲೆಯೊಂದು ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು. 1998 ರಿಂದ 2024 ರವರೆಗೆ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಸತತವಾಗಿ 10 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ.

ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಸತತ 10ನೇ ಬಾರಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸರಿಗಟ್ಟಿದೆ. ಈ ಮೂಲಕ ಒಂದೇ ತಂಡದ ವಿರುದ್ಧದ ಸತತವಾಗಿ 10 ಸರಣಿ ಗೆದ್ದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ.

ವಿಶೇಷ ಎಂದರೆ 2013 ರಿಂದ ವೆಸ್ಟ್ ಇಂಡೀಸ್ ತಂಡವು ಭಾರತದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯ ಗೆದ್ದಿಲ್ಲ. ಈ ಬಾರಿಯಾದರೂ ಇತಿಹಾಸ ಬದಲಿಸುವ ನಿರೀಕ್ಷೆಯಲ್ಲಿದ್ದ ವಿಂಡೀಸ್ ಪಡೆಗೆ ಟೀಮ್ ಇಂಡಿಯಾ ಹೀನಾಯ ಸೋಲುಣಿಸಿದೆ. ಮೊದಲ ಮ್ಯಾಚ್ನಲ್ಲಿ ಇನಿಂಗ್ಸ್ ಹಾಗೂ 140 ರನ್ಗಳ ಜಯ ಸಾಧಿಸಿದ್ದ ಭಾರತ ತಂಡವು ದ್ವಿತೀಯ ಟೆಸ್ಟ್ನಲ್ಲಿ 7 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ವೆಸ್ಟ್ ಇಂಡೀಸ್ ವಿರುದ್ಧ ತನ್ನ ಗೆಲುವಿನ ನಾಗಾಲೋಟ ಮುಂದುವರೆಸಿದೆ.
