ಸತತ ಗೆಲುವುಗಳೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

Updated on: Oct 14, 2025 | 10:57 AM

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 140 ರನ್​ಗಳ ಅಮೋಘ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ವೆಸ್ಟ್ ಇಂಡೀಸ್ ಪಡೆಯನ್ನು 7 ವಿಕೆಟ್​ಗಳಿಂದ ಸೋಲಿಸುವಲ್ಲಿ ಭಾರತೀಯರು ಯಶಸ್ವಿಯಾಗಿದ್ದಾರೆ.

1 / 5
ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಸತತ ಸರಣಿ ಗೆಲುವುಗಳೊಂದಿಗೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವರ್ಲ್ಡ್​ ರೆಕಾರ್ಡ್ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನಕ್ಕೇರಿದೆ.

2 / 5
ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಸತತ 10 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ. 2002 ರಿಂದ ಶುರುವಾದ ಈ ಟೆಸ್ಟ್ ಸರಣಿ ಗೆಲುವಿನ ನಾಗಾಲೋಟದೊಂದಿಗೆ ಭಾರತ ತಂಡವು ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ.

3 / 5
ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಟೆಸ್ಟ್ ಸರಣಿ ಗೆದ್ದ ದಾಖಲೆಯೊಂದು ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು. 1998 ರಿಂದ 2024 ರವರೆಗೆ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಸತತವಾಗಿ 10 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ.

4 / 5
ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಸತತ 10ನೇ ಬಾರಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸರಿಗಟ್ಟಿದೆ. ಈ ಮೂಲಕ ಒಂದೇ ತಂಡದ ವಿರುದ್ಧದ ಸತತವಾಗಿ 10 ಸರಣಿ ಗೆದ್ದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ.

5 / 5
ವಿಶೇಷ ಎಂದರೆ 2013 ರಿಂದ ವೆಸ್ಟ್ ಇಂಡೀಸ್​ ತಂಡವು ಭಾರತದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯ ಗೆದ್ದಿಲ್ಲ. ಈ ಬಾರಿಯಾದರೂ ಇತಿಹಾಸ ಬದಲಿಸುವ ನಿರೀಕ್ಷೆಯಲ್ಲಿದ್ದ ವಿಂಡೀಸ್​ ಪಡೆಗೆ ಟೀಮ್ ಇಂಡಿಯಾ ಹೀನಾಯ ಸೋಲುಣಿಸಿದೆ. ಮೊದಲ ಮ್ಯಾಚ್​ನಲ್ಲಿ ಇನಿಂಗ್ಸ್ ಹಾಗೂ 140 ರನ್​ಗಳ ಜಯ ಸಾಧಿಸಿದ್ದ ಭಾರತ ತಂಡವು ದ್ವಿತೀಯ ಟೆಸ್ಟ್​ನಲ್ಲಿ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ವೆಸ್ಟ್ ಇಂಡೀಸ್ ವಿರುದ್ಧ ತನ್ನ ಗೆಲುವಿನ ನಾಗಾಲೋಟ ಮುಂದುವರೆಸಿದೆ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us