AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟೆಸ್ಟ್ ತಂಡದ ಐವರು ಆಟಗಾರರು ಗಾಯಾಳು!

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Aug 09, 2026 | 7:38 AM

Share
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಸೇರಿದಂತೆ ಭಾರತ ಟೆಸ್ಟ್​ ತಂಡದ ಐವರು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಆ ಆಟಗಾರರು ಯಾರೆಂದರೆ... (PC: BCCI)

1 / 6
ಜಸ್​ಪ್ರೀತ್  ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಆಖಿಬ್ ನಬಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. (PC: GettyImages)

2 / 6
ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಬಲಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಕೂಡ ಟೆಸ್ಟ್ ಸರಣಿಗೆ ಲಭ್ಯವಿರುವುದಿಲ್ಲ. (PC: GettyImages)

3 / 6
ಹರ್ಷಿತ್ ರಾಣಾ: ಭಾರತ ತಂಡದ ವೇಗಿ ಹರ್ಷಿತ್ ರಾಣಾ ಚೇತರಿಸಿಕೊಳ್ಳುವ ಹಂತದಲ್ಲಿದ್ದಾಗಲೇ ಬಲಗಾಲಿನ ಹ್ಯಾಮ್‌ಸ್ಟ್ರಿಂಗ್  ಸಮಸ್ಯೆಗೀಡಾಗಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. (PC: GettyImages)

4 / 6
ನಿತೀಶ್ ಕುಮಾರ್ ರೆಡ್ಡಿ: ಟೀಮ್ ಇಂಡಿಯಾ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರ ಎಡಗಾಲಿನ ಕ್ವಾಡ್ರಿಸೆಪ್ಸ್ ನಲ್ಲಿ ತೀವ್ರ ಗಾಯವಾಗಿದ್ದು, ಹೀಗಾಗಿ ಮುಂಬರುವ ಪಂದ್ಯಗಳಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. (PC: GettyImages)

5 / 6
ವಾಷಿಂಗ್ಟನ್ ಸುಂದರ್: ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಬಲಗಾಲಿನ ಹ್ಯಾಮ್‌ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸುಂದರ್ ಕೂಡ ಕಾಣಿಸಿಕೊಳ್ಳುವುದಿಲ್ಲ.  (PC: GettyImages)

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ