AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಲಾಯ್ತು ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್ ​ನೆಸ್

India vs New Zealand: ಭಾರತದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 215 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 165 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಕಿವೀಸ್ ಪಡೆ 50 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jan 29, 2026 | 7:09 AM

Share
ನ್ಯೂಝಿಲೆಂಡ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ 4ನೇ ಪಂದ್ಯದಲ್ಲಿ ಸೋಲನುಭವಿಸಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡದ ಪರ ಆರಂಭಿಕ ದಾಂಡಿಗ ಟಿಮ್ ಸೈಫರ್ಟ್ ಸ್ಫೋಟಕ ಅರ್ಧಶತಕ ಸಿಡಿಸಿದರು. ಸೈಫರ್ಟ್ ಬಾರಿಸಿದ 62 ರನ್​ಗಳ ನೆರವಿನೊಂದಿಗೆ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 215 ರನ್​ ಕಲೆಹಾಕಿತು.

2 / 6
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಶಿವಂ ದುಬೆ 23 ಎಸೆತಗಳಲ್ಲಿ 65 ರನ್ ಚಚ್ಚಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 18.4 ಓವರ್​ಗಳಲ್ಲಿ 165 ರನ್​ಗಳಿಸಿ ಆಲೌಟ್ ಆಗುವ ಮೂಲಕ ಭಾರತ ತಂಡ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

3 / 6
ಈ ಸೋಲಿನೊಂದಿಗೆ ಭಾರತ ತಂಡದ ಬೃಹತ್ ಮೊತ್ತದ ಚೇಸಿಂಗ್ ಕನಸಾಗಿಯೇ ಉಳಿದಿದೆ. ಅಂದರೆ ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ 118 ಪಂದ್ಯಗಳಲ್ಲಿ ಚೇಸ್ ಮಾಡಿದೆ. ಈ ವೇಳೆ 80 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಹಾಗೆಯೇ 34 ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನುಳಿದ ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾಗಿದ್ದವು.

4 / 6
ಅಂದರೆ ಭಾರತ ತಂಡವು ಚೇಸಿಂಗ್ ವೇಳೆ 80 ಟಿ20 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದಾಗ್ಯೂ  ಒಮ್ಮೆಯೂ 210 ರನ್​ಗಳನ್ನು ಚೇಸ್ ಮಾಡಿ ಗೆದ್ದಿಲ್ಲ. ಭಾರತ ತಂಡದ ಯಶಸ್ವಿ ಚೇಸಿಂಗ್ ಎಂಬುದು 209 ರನ್​ಗಳು. ಅದು ಸಹ ನ್ಯೂಝಿಲೆಂಡ್ ವಿರುದ್ಧ. ಅಂದರೆ ಟೀಮ್ ಇಂಡಿಯಾ ವಿರುದ್ಧ 210 ಕ್ಕಿಂತ ಹೆಚ್ಚಿನ ರನ್​ಗಳಿಸಿದರೆ ಎದುರಾಳಿ ತಂಡಕ್ಕೆ ಗೆಲುವು ಖಚಿತ ಎಂಬಂತಾಗಿದೆ.

5 / 6
ಇದಕ್ಕೆ ತಾಜಾ ಉದಾಹರಣೆ 4ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ಗೆದ್ದಿರುವುದು. ಈ ಪಂದ್ಯದಲ್ಲಿ ಕಿವೀಸ್ ಪಡೆ ಕಲೆಹಾಕಿದ್ದು 215 ರನ್​ಗಳು. ಈ ಗುರಿಯನ್ನು ಬೆನ್ನತ್ತಲಾಗದೇ ಟೀಮ್ ಇಂಡಿಯಾ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾದ ಬೃಹತ್ ಮೊತ್ತದ ಚೇಸಿಂಗ್ ವೀಕ್​ ನೆಸ್ ಮತ್ತೊಮ್ಮೆ ಬಯಲಾಗಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಬೃಹತ್ ಮೊತ್ತ ಪೇರಿಸಲು ಎಲ್ಲಾ ತಂಡಗಳು ಪ್ಲ್ಯಾನ್ ರೂಪಿಸುವುದು ಖಚಿತ.

6 / 6
Follow Us
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ

ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು

ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ

ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್

ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ

LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು

ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು