AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲೇ ಇಲ್ಲ, ಡ್ರಾ ಅಂತು ಇಲ್ಲವೇ ಇಲ್ಲ… ಇದು ಟೀಮ್ ಇಂಡಿಯಾದ ದಶಕದ ಗೆಲುವಿನ ನಾಗಾಲೋಟ

Team India: ಭಾರತ ತಂಡವು ಕಳೆದ 11 ವರ್ಷಗಳಲ್ಲಿ ತವರಿನಲ್ಲಿ 18 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಹದಿನೆಂಟು ಸರಣಿಗಳಲ್ಲೂ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ತವರಿನಲ್ಲಿ ಸತತವಾಗಿ 15 ಕ್ಕಿಂತ ಅಧಿಕ ಸರಣಿಗಳನ್ನು ಗೆದ್ದ ವಿಶ್ವ ಏಕೈಕ ತಂಡವಾಗಿ ಟೀಮ್ ಇಂಡಿಯಾ ಹೊರಹೊಮ್ಮಿದೆ.

ಝಾಹಿರ್ ಯೂಸುಫ್
|

Updated on: Oct 01, 2024 | 4:53 PM

Share
ಸೋಲೇ ಇಲ್ಲ... ಡ್ರಾ ಅಂತು ಇಲ್ಲವೇ ಇಲ್ಲ... ಇದು ಭಾರತದಲ್ಲಿನ ಟೀಮ್ ಇಂಡಿಯಾದ ಗೆಲುವಿನ ನಾಗಾಲೋಟ. ಹೌದು, ಕಳೆದ ಒಂದು ದಶಕದಿಂದ ಭಾರತ ತಂಡವು ತವರಿನಲ್ಲಿ ಒಂದೇ ಒಂದು ಟೆಸ್ಟ್ ಸರಣಿ ಸೋತಿಲ್ಲ. ಅದರಲ್ಲೂ ಯಾವುದೇ ಎದುರಾಳಿಗೂ ಕನಿಷ್ಠ ಪಕ್ಷ ಸರಣಿಯನ್ನು ಡ್ರಾನಲ್ಲಿ ಅಂತ್ಯಗೊಳಿಸಲು ಸಾಧ್ಯವಾಗಿಲ್ಲ ಎಂದರೆ ನಂಬಲೇಬೇಕು.

1 / 5
2013 ರಿಂದ ಶುರುವಾದ ಈ ಸರಣಿ ಗೆಲುವಿನ ನಾಗಾಲೋಟ ಮುಂದುವರೆದಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿರುವ ಟೀಮ್ ಇಂಡಿಯಾ ಸತತ 18 ಸರಣಿಗಳನ್ನು ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ತವರಿನಲ್ಲಿ ಟೀಮ್ ಇಂಡಿಯಾ ತನ್ನ ಪಾರುಪತ್ಯವನ್ನು ಮುಂದುವರೆಸಿದೆ.

2 / 5
ವಿಶೇಷ ಎಂದರೆ ಟೀಮ್ ಇಂಡಿಯಾವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡ ತವರಿನಲ್ಲಿ ಸತತವಾಗಿ 10 ಕ್ಕಿಂತ ಅಧಿಕ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ 1994 ರಿಂದ 2000 ನಡುವೆ ಸತತ 10 ಟೆಸ್ಟ್ ಸರಣಿಗಳನ್ನು ಗೆದ್ದಿರುವುದು ಶ್ರೇಷ್ಠ ಸಾಧನೆ.

3 / 5
ಇತ್ತ ಟೀಮ್ ಇಂಡಿಯಾ 2013 ರಿಂದ 2024 ರವರೆಗೆ ತವರಿನಲ್ಲಿ ಸತತವಾಗಿ 18 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ತಂಡದಿಂದಲೂ ಸಾಧ್ಯವಾಗದ ಸರ್ವಶ್ರೇಷ್ಠ ದಾಖಲೆಯನ್ನು ಟೀಮ್ ಇಂಡಿಯಾ ಮಾಡಿ ತೋರಿಸಿದೆ.

4 / 5
ಇನ್ನು ಟೀಮ್ ಇಂಡಿಯಾದ ಮುಂದಿನ ಎದುರಾಳಿ ನ್ಯೂಝಿಲೆಂಡ್. ಅಕ್ಟೋಬರ್ 16 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಒಟ್ಟು 3 ಪಂದ್ಯಗಳನ್ನಾಡಲಿದೆ. ತವರಿನಲ್ಲಿ ನಡೆಯಲಿರುವ ಈ ಸರಣಿಯಲ್ಲೂ ಟೀಮ್ ಇಂಡಿಯಾ ಗೆಲ್ಲುವ ಮೂಲಕ ಸರಣಿ ಗೆಲುವಿನ ನಾಗಾಲೋಟವನ್ನು 19ಕ್ಕೇರಿಸುವ ವಿಶ್ವಾಸದಲ್ಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!

ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್

ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​

ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ

ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!

ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್

ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ

ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ