AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಸೋಲನ್ನು ಸಂಭ್ರಮಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Abid Ali Cheers India's Ireland T20 Defeat: ಐರ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಭಾರತದ ಅನಿರೀಕ್ಷಿತ ಸೋಲು ಕ್ರಿಕೆಟ್ ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಈ ಸೋಲಿಗೆ ಪಾಕ್ ಮಾಜಿ ಕ್ರಿಕೆಟಿಗ ಅಬಿದ್ ಅಲಿ ಸಂತಸ ವ್ಯಕ್ತಪಡಿಸಿ, ಅವರ ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ. ಸ್ವತಃ ಅಬಿದ್ ಅಲಿ ಪ್ರತಿನಿಧಿಸಿದ್ದ ಪಾಕಿಸ್ತಾನ ತಂಡವೂ 2024ರಲ್ಲಿ ಐರ್ಲೆಂಡ್ ವಿರುದ್ಧ ಸೋತಿತ್ತು ಎಂಬುದು ಗಮನಾರ್ಹ.

ಪೃಥ್ವಿಶಂಕರ
|

Updated on: Jun 29, 2026 | 10:44 PM

Share
ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡ ಹೀನಾಯ ಸೋಲು ಅನುಭವಿಸಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಟಿ20 ವಿಶ್ವಕಪ್ ವಿಜೇತ ತಂಡವು ಐರ್ಲೆಂಡ್‌ನಂತಹ ದುರ್ಬಲ ತಂಡದ ವಿರುದ್ಧ ಟಿ20 ಸರಣಿಯನ್ನು ಸೋತಿರುವುದನ್ನು ಯಾರಿಗೂ ನಂಬಲು ಸಾಧ್ಯವಾಗುತ್ತಿಲ್ಲ. ಆದರೆ ಟೀಂ ಇಂಡಿಯಾದ ಈ ಸೋಲು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬಿದ್ ಅಲಿಗೆ ತುಂಬಾ ಸಂತೋಷವನ್ನು ತಂದಿದೆಯಂತೆ.

1 / 5
ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲಿನ ನಂತರ, ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಪಾಕ್ ಮಾಜಿ ಕ್ರಿಕೆಟಿಗ ಅಬಿದ್ ಅಲಿ "ಭಾರತ ಸೋತಿರುವುದನ್ನು ನೋಡಲು ಸಂತೋಷವಾಗಿದೆ" ಎಂದು ಬರೆದುಕೊಂಡಿದ್ದಾರೆ. ಅಬಿದ್ ಅಲಿ ಅವರ ಈ ಪೋಸ್ಟ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

2 / 5
ಅಬಿದ್ ಅಲಿ ಪಾಕಿಸ್ತಾನ ಪರ 16 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 49.16 ಸರಾಸರಿಯಲ್ಲಿ 1180 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಶತಕಗಳು ಮತ್ತು ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ ಪಾಕಿಸ್ತಾನ ಪರ ಆರು ಏಕದಿನ ಪಂದ್ಯಗಳನ್ನು ಆಡಿರುವ ಅಬಿದ್ ಅಲಿ ಒಂದು ಶತಕ ಮತ್ತು ಒಂದು ಅರ್ಧಶತಕದೊಂದಿಗೆ 234 ರನ್ ಗಳಿಸಿದ್ದಾರೆ.

3 / 5
ಅಬಿದ್ ಅಲಿ ವೃತ್ತಿಪರ ಕ್ರಿಕೆಟ್‌ನಲ್ಲಿ ಒಟ್ಟು 37 ಶತಕಗಳನ್ನು ಬಾರಿಸಿದ್ದು, ತಮ್ಮ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 11,696 ರನ್‌ಗಳನ್ನು ಮತ್ತು ಲಿಸ್ಟ್ ಎ ಕ್ರಿಕೆಟ್‌ನಲ್ಲಿ 3,874 ರನ್‌ಗಳನ್ನು ಕಲೆಹಾಕಿದ್ದಾರೆ. ಆದಾಗ್ಯೂ, ಅವರ ಅಂತರರಾಷ್ಟ್ರೀಯ ವೃತ್ತಿಜೀವನವು ಕೇವಲ ಎರಡು ವರ್ಷಗಳಲ್ಲಿ ಕೊನೆಗೊಂಡಿತು. ಅವರು 2021 ರಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು.

4 / 5
ಇನ್ನು ಭಾರತ ಹಾಗೂ ಐರ್ಲೆಂಡ್ ನಡುವಿನ ಸರಣಿಯ ಬಗ್ಗೆ ಹೇಳುವುದಾದರೆ.. ಟೀಂ ಇಂಡಿಯಾ ಮೊದಲ ಬಾರಿಗೆ ಐರ್ಲೆಂಡ್ ವಿರುದ್ಧ ಪಂದ್ಯವನ್ನು ಸೋಲುವುದರ ಜೊತೆಗೆ ಸರಣಿಯನ್ನೂ ಸೋತಿದೆ. ಇಲ್ಲಿ ಇನ್ನೊಂದು ಗಮನಿಸಬೇಕಾದ ಸಂಗತಿಯೆಂದರೆ ಟೀಂ ಇಂಡಿಯಾದ ಸೋಲನ್ನು ಸಂಭ್ರಮಿಸುತ್ತಿರುವ ಅಬಿದ್ ಅಲಿ ಪ್ರತಿನಿಧಿಸಿದ್ದ ಪಾಕಿಸ್ತಾನ ತಂಡ ಕೂಡ 2024 ರಲ್ಲಿ ಐರ್ಲೆಂಡ್ ವಿರುದ್ಧ ಸೋಲನ್ನು ಕಂಡಿತ್ತು.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ